AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಭಟನೆ ವೇಳೆ ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌

ಪ್ರತಿಭಟನೆ ವೇಳೆ ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌

ರಮೇಶ್ ಬಿ. ಜವಳಗೇರಾ
|

Updated on: Jun 15, 2026 | 7:55 PM

Share

ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್ ಜನತಾ ಪಾರ್ಟಿಯ ಸಂಸ್ಥಾಪಕ ಅಭಿಜೀತ್ ದೀಪ್ಕೆ ಮೇಲೆ ಸೋಮವಾರ(ಜೂ. 15) ಹಲ್ಲೆ ನಡೆದಿದೆ ಎಂದು ವರದಿಯಾಗಿದೆ. ಹೌದು..ಇಂದು (ಜೂನ್ 15) ಜೈಪುರದ ಶಹೀದ್ ಸ್ಮಾರಕದ ಬಳಿ ಬೃಹತ್ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯತ್ತ ಅಭಿಜೀತ್ ಡಿಪ್ಕೆ ಅವರನ್ನು ಬೆಂಬಲಿಗರು ತಮ್ಮ ಹೆಗಲ ಮೇಲೆ ಹೊತ್ತು ತರುತ್ತಿದ್ದ ವೇಳೆ ದಿಢೀರ್ ಎಂದು ನುಗ್ಗಿದ ಕೆಲ ಕಿಡಿಗೇಡಿಗಳು, ಅವರ ಕುತ್ತಿಗೆಯಲ್ಲಿದ್ದ ಸ್ಕಾರ್ಫ್ ಎಳೆದು, ಮುಖಕ್ಕೆ ಹಲವು ಬಾರಿ ಕಪಾಳಮೋಕ್ಷ ಮಾಡಿದ್ದಾರೆ.

ಜೈಪುರ, (ಜೂನ್ 15): ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಕಾಕ್ರೋಚ್ ಜನತಾ ಪಾರ್ಟಿಯ ಸಂಸ್ಥಾಪಕ ಅಭಿಜೀತ್ ದೀಪ್ಕೆ  (CJP founder Abhijeet Dipke) ಮೇಲೆ ಸೋಮವಾರ(ಜೂ. 15) ಹಲ್ಲೆ ನಡೆದಿದೆ ಎಂದು ವರದಿಯಾಗಿದೆ. ಹೌದು..ಇಂದು (ಜೂನ್ 15) ಜೈಪುರದ ಶಹೀದ್ ಸ್ಮಾರಕದ ಬಳಿ ಬೃಹತ್ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯತ್ತ ಅಭಿಜೀತ್ ಡಿಪ್ಕೆ ಅವರನ್ನು ಬೆಂಬಲಿಗರು ತಮ್ಮ ಹೆಗಲ ಮೇಲೆ ಹೊತ್ತು ತರುತ್ತಿದ್ದ ವೇಳೆ ದಿಢೀರ್ ಎಂದು ನುಗ್ಗಿದ ಕೆಲ ಕಿಡಿಗೇಡಿಗಳು, ಅವರ ಕುತ್ತಿಗೆಯಲ್ಲಿದ್ದ ಸ್ಕಾರ್ಫ್ ಎಳೆದು, ಮುಖಕ್ಕೆ ಹಲವು ಬಾರಿ ಕಪಾಳಮೋಕ್ಷ ಮಾಡಿದ್ದಾರೆ. ಅಲ್ಲದೆ, ಅವರನ್ನು ಕೆಳಗೆ ಬೀಳಿಸಲು ಯತ್ನಿಸಿದ್ದಾರೆ. ಈ ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More