AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

'ಲೆಹ್ರಾ ದೋ ತಿರಂಗ' ರ‍್ಯಾಲಿಗೂ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಪೊಲೀಸ್ ವಶಕ್ಕೆ

‘ಲೆಹ್ರಾ ದೋ ತಿರಂಗ’ ರ‍್ಯಾಲಿಗೂ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಪೊಲೀಸ್ ವಶಕ್ಕೆ

ಸುಷ್ಮಾ ಚಕ್ರೆ
|

Updated on: Oct 16, 2026 | 5:32 PM

Share

ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ಇಂದು (ಶುಕ್ರವಾರ) ಸಿಜೆಪಿ ಕರೆನೀಡಿದ್ದ 'ಲೆಹ್ರಾ ದೋ ತಿರಂಗ' ಪ್ರತಿಭಟನೆಗೂ ಮೊದಲೇ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕನ್ನಾಟ್ ಪ್ಲೇಸ್ ಸುತ್ತಮುತ್ತ ನಿಷೇಧಾಜ್ಞೆ ಜಾರಿಯಲ್ಲಿದ್ದು, ಎನ್‌ಡಿಎಂಸಿ ಈ 'ತಿರಂಗ ಯಾತ್ರೆ'ಗೆ ಯಾವುದೇ ರೀತಿಯ ಅನುಮತಿಯನ್ನು ನೀಡಿಲ್ಲ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಪೊಲೀಸರು ಈ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ.

ನವದೆಹಲಿ, ಅಕ್ಟೋಬರ್ 16: ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ದೆಹಲಿಯ ಕನ್ನಾಟ್ ಪ್ಲೇಸ್‌ನಲ್ಲಿ ಆಯೋಜಿಸಿದ್ದ ‘ಲೆಹ್ರಾ ದೋ ತಿರಂಗ’ ರ‍್ಯಾಲಿಗೂ ಮೊದಲೇ ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರನ್ನು ದೆಹಲಿ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದುಕೊಂಡಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ಎಸ್​ಐಆರ್ ಪ್ರಕ್ರಿಯೆಯ ಅಕ್ರಮಗಳನ್ನು ವಿರೋಧಿಸಿ ಇಂದು ಸಂಜೆ ಸೆಂಟ್ರಲ್ ಪಾರ್ಕ್‌ನಲ್ಲಿ ರಾಷ್ಟ್ರಧ್ವಜದೊಂದಿಗೆ ಜಮಾಯಿಸಲು ಸಿಜೆಪಿ ಕರೆ ನೀಡಿತ್ತು.

ಇದಕ್ಕೂ ಮೊದಲೇ ಕನ್ನಾಟ್ ಪ್ಲೇಸ್ ಹಾಗೂ ಸುತ್ತಮುತ್ತ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ತಡೆಯಲು ಅವರನ್ನು ವಶಕ್ಕೆ ಪಡೆಯಲಾಗಿದೆ. ಈ ವೇಳೆ ಸಿಜೆಪಿ ಕಾರ್ಯಕರ್ತರು ಅಭಿಜೀತ್ ದಿಪ್ಕೆ ಅವರನ್ನು ಕರೆದೊಯ್ಯುತ್ತಿದ್ದ ಪೊಲೀಸ್ ವಾಹನವನ್ನು ಅಡ್ಡಗಟ್ಟಿ ಘೋಷಣೆ ಕೂಗಿದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಕನ್ನಾಟ್ ಪ್ಲೇಸ್‌ನಲ್ಲಿ ಸುಮಾರು 6,000ಕ್ಕೂ ಹೆಚ್ಚು ಪೊಲೀಸ್ ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. ನಿಷೇಧಾಜ್ಞೆ ಜಾರಿಯಲ್ಲಿದ್ದು, ಪ್ರತಿಭಟನಾ ಸ್ಥಳವಾಗಿದ್ದ ಸೆಂಟ್ರಲ್ ಪಾರ್ಕ್ ಅನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More