AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಜೆಪಿ ಪ್ರತಿಭಟನೆ ನಿಷೇಧಿಸಿ: ಎಲ್ಲ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಕಾರ್ಯದರ್ಶಿ ಸೂಚನೆ

ಸಿಜೆಪಿ ಪ್ರತಿಭಟನೆ ನಿಷೇಧಿಸಿ: ಎಲ್ಲ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಕಾರ್ಯದರ್ಶಿ ಸೂಚನೆ

ಗಣಪತಿ ಶರ್ಮಾ
|

Updated on: Oct 10, 2026 | 7:39 AM

Share

ಸಿಜೆಪಿ ಪ್ರತಿಭಟನೆಗಳನ್ನು ನಿಷೇಧಿಸುವಂತೆ ಎಲ್ಲಾ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಸೂಚನೆ ನೀಡಿದೆ. ದೆಹಲಿಗೆ ಹೆಚ್ಚಿನ ಸಂಖ್ಯೆಯ ಪ್ರತಿಭಟನಾಕಾರರು ಬರುವುದನ್ನು ತಡೆಯಲು ಮತ್ತು ರಾಜ್ಯಗಳಲ್ಲಿ ಗಲಭೆಗಳನ್ನು ನಿಯಂತ್ರಿಸಲು ಈ ಆದೇಶ ಹೊರಡಿಸಲಾಗಿದೆ. ಈ ಮಧ್ಯೆ, ದೆಹಲಿಯಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಜಂತರ್ ಮಂತರ್ ಸುತ್ತಮುತ್ತ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ನವದೆಹಲಿ, ಅಕ್ಟೋಬರ್ 10: ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ, ಕೇಂದ್ರ ಗೃಹ ಸಚಿವಾಲಯವು ಮಹತ್ವದ ನಿರ್ದೇಶನ ಹೊರಡಿಸಿದೆ. ಸಿಜೆಪಿ ಪ್ರತಿಭಟನೆಗಳನ್ನು ನಿಷೇಧಿಸುವಂತೆ ಎಲ್ಲಾ ರಾಜ್ಯಗಳಿಗೂ ಗೃಹ ಸಚಿವಾಲಯದ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ. ನವದೆಹಲಿಯ ಪ್ರತಿಭಟನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಿಜೆಪಿ ಪ್ರತಿಭಟನಾಕಾರರು ಬರುವ ಸಾಧ್ಯತೆ ಇರುವ ಕಾರಣ, ಆಯಾ ರಾಜ್ಯಗಳಲ್ಲೂ ಇಂತಹ ಆಂದೋಲನಗಳು ಗಲಭೆಗಳಿಗೆ ತಿರುಗಬಾರದು ಎಂದು ಮುನ್ನೆಚ್ಚರಿಕೆ ವಹಿಸಲು ಈ ಆದೇಶ ನೀಡಲಾಗಿದೆ. ಕಟ್ಟುನಿಟ್ಟಿನ ನಿಗಾ ವಹಿಸುವಂತೆ ಸೂಚಿಸಲಾಗಿದೆ. ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗಳನ್ನು ಗಮನಿಸಿ, ತಮ್ಮ ಸ್ಥಳಗಳಲ್ಲಿ ಅಂತಹ ಪ್ರತಿಭಟನೆಗಳನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ರಾಜ್ಯಗಳಿಗೆ ಎಚ್ಚರಿಕೆ ನೀಡಲಾಗಿದೆ.

ಇದರ ಜೊತೆಗೆ, ದೆಹಲಿಯ ಜಂತರ್ ಮಂತರ್‌ನಲ್ಲಿ ನಾಲ್ಕು ಕಿಲೋಮೀಟರ್ ವ್ಯಾಪ್ತಿಯಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಶುಕ್ರವಾರ ರಾತ್ರಿ 9 ಗಂಟೆಯಿಂದ ಇಂದು ಸಂಜೆ 6 ಗಂಟೆಯವರೆಗೆ ಯಾವುದೇ ಇಂಟರ್ನೆಟ್ ಸೌಲಭ್ಯ ಲಭ್ಯವಿರುವುದಿಲ್ಲ. ಪ್ರತಿಭಟನಾ ಸ್ಥಳದಿಂದ ಮಾಹಿತಿ ಹೊರಗೆ ಹೋಗುವುದನ್ನು ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂಬುದು ತಿಳಿದುಬಂದಿದೆ.

ವರದಿ: ನಟರಾಜ್, ಟಿವಿ9, ನವದೆಹಲಿ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More