ಸಿಜೆಪಿ ಪ್ರತಿಭಟನೆಗೂ ಮುನ್ನ ಪೊಲೀಸರ ಕಾರ್ಯಾಚರಣೆ: 30 ರಿಂದ 40 ಜನ ವಶಕ್ಕೆ

Updated on: Oct 10, 2026 | 10:55 AM

ದೆಹಲಿಯಲ್ಲಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಪ್ರತಿಭಟನೆಗೂ ಮುನ್ನ ಪೊಲೀಸರು ವ್ಯಾಪಕ ಕಾರ್ಯಾಚರಣೆ ನಡೆಸಿ, 30-40 ಜನರನ್ನು ವಶಕ್ಕೆ ಪಡೆದಿದ್ದಾರೆ. ಗುರುಗ್ರಾಮ ಗಡಿಯಲ್ಲಿ ವಾಹನ ತಪಾಸಣೆ, ಮೆಟ್ರೋ ನಿಲ್ದಾಣಗಳ ಬಂದ್, ಜಂತರ್ ಮಂತರ್ ಬಳಿ ಬಿಗಿ ಭದ್ರತೆ ಹಾಗೂ ಭಾರೀ ಪೊಲೀಸ್ ನಿಯೋಜನೆ ಮೂಲಕ ಪ್ರತಿಭಟನೆ ತಡೆಯಲು ಪ್ರಯತ್ನಿಸಲಾಗುತ್ತಿದೆ.

ನವದೆಹಲಿ, ಅಕ್ಟೋಬರ್ 10: ದೆಹಲಿಯಲ್ಲಿ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಯನ್ನು ಆಗ್ರಹಿಸಿ ಸಿಜೆಪಿ (CJP) ಬೃಹತ್ ಪ್ರತಿಭಟನೆಗೆ ಸಜ್ಜಾಗಿದೆ. ಆದರೆ, ಪ್ರತಿಭಟನೆ ಆರಂಭಕ್ಕೂ ಮುನ್ನವೇ ದೆಹಲಿ ಪೊಲೀಸರು ವ್ಯಾಪಕ ಕಾರ್ಯಾಚರಣೆ ನಡೆಸಿದ್ದು, ಸುಮಾರು 30-40 ಜನರನ್ನು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆ ತಡೆಯಲು ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದು, ಗುರುಗ್ರಾಮ ಗಡಿಯಲ್ಲಿ ದೆಹಲಿಗೆ ಬರುವ ವಾಹನಗಳನ್ನು ಸಂಪೂರ್ಣ ತಪಾಸಣೆ ಮಾಡಿ ಒಳಗೆ ಬಿಡಲಾಗುತ್ತಿದೆ. ಅರೆಸೇನಾ ಪಡೆಗಳನ್ನು ಸಹ ನಿಯೋಜಿಸಲಾಗಿದೆ.

ಜಂತರ್ ಮಂತರ್ ಬಳಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ, ಪ್ರತಿಭಟನಾಕಾರರು ತಲುಪದಂತೆ ತಡೆಯಲು ಪ್ರಯತ್ನಿಸಲಾಗುತ್ತಿದೆ. ಪೊಲೀಸರು ಸಭೆ ನಡೆಸಿ, ಪ್ರತಿಭಟನಾಕಾರರನ್ನು ಹೇಗೆ ತಡೆಯಬೇಕು ಮತ್ತು ವಶಕ್ಕೆ ಪಡೆಯಬೇಕು ಎಂಬುದರ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More