AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ, ದೀಪ್ಕೆ ಭಾಗಿ

ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ, ದೀಪ್ಕೆ ಭಾಗಿ

ರಮೇಶ್ ಬಿ. ಜವಳಗೇರಾ
|

Updated on: Oct 08, 2026 | 3:25 PM

Share

ಕಾಕ್ರೋಚ್‌ ಜನತಾ ಪಾರ್ಟಿ ಸಹ ಸಿಡಿದೆದ್ದಿದೆ. ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಸಿಜೆಪಿ ಈಗಾಗಲೇ ಗಡುವು ನೀಡಿತ್ತು. ಆದರೂ ಅವರು ರಾಜೀನಾಮೆ ನೀಡದಿದ್ದಕ್ಕೆ ಸಿಜೆಪಿ ಪ್ರತಿಭಟನೆ ನಡೆಸಿದೆ. ಇಂದು (ಅಕ್ಟೋಬರ್ 08) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಾಕ್ರೋಚ್‌ ಜನತಾ ಪಾರ್ಟಿ ಪ್ರತಿಭಟನೆ ನಡೆಸಿದ್ದು, ಜ್ಞಾನೇಶ್‌ ಕುಮಾರ್‌ ರಾಜೀನಾಮೆ ನೀಡುವಂತೆ ಒತ್ತಾಯಿಸಿದೆ.

ಬೆಂಗಳೂರು, (ಅಕ್ಟೋಬರ್ 08): ಎಸ್​​​ಐಆರ್ ಸಂಬಂಧ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹಗಳು ವ್ಯಕ್ತವಾಗುತ್ತಿವೆ. ಕಾಂಗ್ರೆಸ್​ ಪಕ್ಷ ಸಹ ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಪಟ್ಟು ಹಿಡಿದಿದ್ದು, ರಾಜೀನಾಮೆ ನೀಡುವವರೆಗೂ ಪ್ರತಿಭಟನೆ ಮಾಡುವುದಾಗಿ ಹೇಳಿದೆ. ಇದರ ಮಧ್ಯೆ ಕಾಕ್ರೋಚ್‌ ಜನತಾ ಪಾರ್ಟಿ ಸಹ ಸಿಡಿದೆದ್ದಿದೆ. ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಸಿಜೆಪಿ ಈಗಾಗಲೇ ಗಡುವು ನೀಡಿತ್ತು. ಆದರೂ ಅವರು ರಾಜೀನಾಮೆ ನೀಡದಿದ್ದಕ್ಕೆ ಸಿಜೆಪಿ ಪ್ರತಿಭಟನೆ ನಡೆಸಿದೆ. ಇಂದು (ಅಕ್ಟೋಬರ್ 08) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಾಕ್ರೋಚ್‌ ಜನತಾ ಪಾರ್ಟಿ ಪ್ರತಿಭಟನೆ ನಡೆಸಿದ್ದು, ಜ್ಞಾನೇಶ್‌ ಕುಮಾರ್‌ ರಾಜೀನಾಮೆ ನೀಡುವಂತೆ ಒತ್ತಾಯಿಸಿದೆ.

ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ, ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲ್ ಗೌಡ, ಯೂಟ್ಯೂಬರ್ ಧ್ರುವ್ ರಾಠಿ, ಬಹುಭಾಷಾ ನಟ ಪ್ರಕಾಶ್ ರಾಜ್ , ಕಿಶೋರ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More