ಎಸ್ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ, ದೀಪ್ಕೆ ಭಾಗಿ
ಕಾಕ್ರೋಚ್ ಜನತಾ ಪಾರ್ಟಿ ಸಹ ಸಿಡಿದೆದ್ದಿದೆ. ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಈಗಾಗಲೇ ಗಡುವು ನೀಡಿತ್ತು. ಆದರೂ ಅವರು ರಾಜೀನಾಮೆ ನೀಡದಿದ್ದಕ್ಕೆ ಸಿಜೆಪಿ ಪ್ರತಿಭಟನೆ ನಡೆಸಿದೆ. ಇಂದು (ಅಕ್ಟೋಬರ್ 08) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ ನಡೆಸಿದ್ದು, ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವಂತೆ ಒತ್ತಾಯಿಸಿದೆ.
ಬೆಂಗಳೂರು, (ಅಕ್ಟೋಬರ್ 08): ಎಸ್ಐಆರ್ ಸಂಬಂಧ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಗಳು ವ್ಯಕ್ತವಾಗುತ್ತಿವೆ. ಕಾಂಗ್ರೆಸ್ ಪಕ್ಷ ಸಹ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು ಹಿಡಿದಿದ್ದು, ರಾಜೀನಾಮೆ ನೀಡುವವರೆಗೂ ಪ್ರತಿಭಟನೆ ಮಾಡುವುದಾಗಿ ಹೇಳಿದೆ. ಇದರ ಮಧ್ಯೆ ಕಾಕ್ರೋಚ್ ಜನತಾ ಪಾರ್ಟಿ ಸಹ ಸಿಡಿದೆದ್ದಿದೆ. ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಈಗಾಗಲೇ ಗಡುವು ನೀಡಿತ್ತು. ಆದರೂ ಅವರು ರಾಜೀನಾಮೆ ನೀಡದಿದ್ದಕ್ಕೆ ಸಿಜೆಪಿ ಪ್ರತಿಭಟನೆ ನಡೆಸಿದೆ. ಇಂದು (ಅಕ್ಟೋಬರ್ 08) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ ನಡೆಸಿದ್ದು, ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವಂತೆ ಒತ್ತಾಯಿಸಿದೆ.
ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ, ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲ್ ಗೌಡ, ಯೂಟ್ಯೂಬರ್ ಧ್ರುವ್ ರಾಠಿ, ಬಹುಭಾಷಾ ನಟ ಪ್ರಕಾಶ್ ರಾಜ್ , ಕಿಶೋರ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
