ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ:ಬಿಜೆಪಿ ಶಾಸಕ ಮುನಿರತ್ನ ಮೇಲೆ ಹಲ್ಲೆಗೆ ಯತ್ನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಬಾಗರಬಾವಿ ಅಂಬೇಡ್ಕರ್ ಕಾಲೇಜಿನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಯಾಗಿದೆ. ಈ ಸಂದರ್ಭದಲ್ಲಿ ಆರ್ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ
ಬೆಂಗಳೂರು, (ಅಕ್ಟೋಬರ್ 23): ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಬಾಗರಬಾವಿ ಅಂಬೇಡ್ಕರ್ ಕಾಲೇಜಿನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಯಾಗಿದೆ. ಈ ಸಂದರ್ಭದಲ್ಲಿ ಆರ್ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಮುನಿರತ್ನ, ಎನ್ಡಿಎ ಅಭ್ಯರ್ಥಿ ಎ.ಪಿ.ರಂಗನಾಥ್ಗೆ ಬೆಂಬಲ ಸೂಚಿಸಲು ಬಂದಿದ್ದೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ನನ್ನ ಮೇಲೆ ಹಲ್ಲೆಗೆ ಯತ್ನಿಸಿದ್ರು. ಆಗ ಪೊಲೀಸರು ಬಂದು ನನ್ನನ್ನು ರಕ್ಷಿಸಿದರು, ಇಲ್ಲವಾದರೆ ಸಾಯಿಸಿ ಬಿಡುತ್ತಿದ್ದರು ಎಂದು ಆರೋಪಿಸಿದ್ದಾರೆ.
ಪರಿಷತ್ ಚುನಾವಣೆ ಹಿನ್ನೆಲೆ ನಮ್ಮ ಕಾರ್ಯಕರ್ತರು ಒಂದೆಡೆ ಕುಳಿತಿದ್ರು. ಅವರ ಅಭ್ಯರ್ಥಿ ಬೆಂಬಲಿಗರು ಒಂದೆಡೆ ಕುಳಿತಿದ್ದರು. ಅಲ್ಲಿಗೆ ನಮ್ಮ ಮಾಜಿ ಕಾರ್ಪೊರೇಟರ್ ಹೋದ ಕೂಡಲೇ ಹಿಡಿದು ಹಲ್ಲೆ ಮಾಡಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ಹೊರಗಡೆಯಿಂದ ಜನರನ್ನು ಕರೆಸಿದ್ದಾರೆ. ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಇಷ್ಟು ಕೆಟ್ಟದಾಗಿ ನಡೆದುಕೊಳ್ಳಬೇಕಾ? ಈ ಬಗ್ಗೆ ಬಿಬಿಎಂಪಿ ಮಾಜಿ ಸದಸ್ಯ ಗೋವಿಂದರಾಜು ನೀಡಲು ತೆರಳಿದ್ದಾರೆ. ನನ್ನ ಮೇಲೆ ಹಲ್ಲೆ ಮಾಡಲು ಬಂದಾಗ ಪೊಲೀಸರು ರಕ್ಷಣೆ ಮಾಡಿದ್ರು. ಈ ವಿಚಾರವನ್ನು ಹೆಚ್.ಡಿ.ಕುಮಾರಸ್ವಾಮಿಗೆ ಮಾಹಿತಿ ನೀಡಿದ್ದೇನೆ ಎಂದರು.

