ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ:ಬಿಜೆಪಿ ಶಾಸಕ ಮುನಿರತ್ನ ಮೇಲೆ ಹಲ್ಲೆಗೆ ಯತ್ನ

Edited By:

Updated on: Oct 23, 2026 | 2:44 PM

ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಬಾಗರಬಾವಿ ಅಂಬೇಡ್ಕರ್ ಕಾಲೇಜಿನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಯಾಗಿದೆ. ಈ ಸಂದರ್ಭದಲ್ಲಿ ಆರ್​ಆರ್​​ ನಗರ ಬಿಜೆಪಿ ಶಾಸಕ ಮುನಿರತ್ನ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ

ಬೆಂಗಳೂರು, (ಅಕ್ಟೋಬರ್ 23): ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಬಾಗರಬಾವಿ ಅಂಬೇಡ್ಕರ್ ಕಾಲೇಜಿನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಯಾಗಿದೆ. ಈ ಸಂದರ್ಭದಲ್ಲಿ ಆರ್​ಆರ್​​ ನಗರ ಬಿಜೆಪಿ ಶಾಸಕ ಮುನಿರತ್ನ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಮುನಿರತ್ನ, ಎನ್​ಡಿಎ ಅಭ್ಯರ್ಥಿ ಎ.ಪಿ.ರಂಗನಾಥ್​​ಗೆ ಬೆಂಬಲ‌ ಸೂಚಿಸಲು ಬಂದಿದ್ದೆ. ಈ ವೇಳೆ ಕಾಂಗ್ರೆಸ್​ ಕಾರ್ಯಕರ್ತರು ನನ್ನ ಮೇಲೆ ಹಲ್ಲೆಗೆ ಯತ್ನಿಸಿದ್ರು. ಆಗ ಪೊಲೀಸರು ಬಂದು ನನ್ನನ್ನು ರಕ್ಷಿಸಿದರು, ಇಲ್ಲವಾದರೆ ಸಾಯಿಸಿ ಬಿಡುತ್ತಿದ್ದರು ಎಂದು ಆರೋಪಿಸಿದ್ದಾರೆ.

ಪರಿಷತ್ ಚುನಾವಣೆ ಹಿನ್ನೆಲೆ ನಮ್ಮ ಕಾರ್ಯಕರ್ತರು ಒಂದೆಡೆ ಕುಳಿತಿದ್ರು. ಅವರ ಅಭ್ಯರ್ಥಿ ಬೆಂಬಲಿಗರು ಒಂದೆಡೆ ಕುಳಿತಿದ್ದರು. ಅಲ್ಲಿಗೆ ನಮ್ಮ ಮಾಜಿ ಕಾರ್ಪೊರೇಟರ್​ ಹೋದ ಕೂಡಲೇ ಹಿಡಿದು ಹಲ್ಲೆ ಮಾಡಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ಹೊರಗಡೆಯಿಂದ ಜನರನ್ನು ಕರೆಸಿದ್ದಾರೆ. ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಇಷ್ಟು ಕೆಟ್ಟದಾಗಿ ನಡೆದುಕೊಳ್ಳಬೇಕಾ? ಈ ಬಗ್ಗೆ ಬಿಬಿಎಂಪಿ ಮಾಜಿ ಸದಸ್ಯ ಗೋವಿಂದರಾಜು ನೀಡಲು ತೆರಳಿದ್ದಾರೆ. ನನ್ನ ಮೇಲೆ ಹಲ್ಲೆ ಮಾಡಲು ಬಂದಾಗ ಪೊಲೀಸರು ರಕ್ಷಣೆ ಮಾಡಿದ್ರು. ಈ ವಿಚಾರವನ್ನು ಹೆಚ್.ಡಿ.ಕುಮಾರಸ್ವಾಮಿಗೆ ಮಾಹಿತಿ ನೀಡಿದ್ದೇನೆ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More