ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
‘ಬಿಗ್ ಬಾಸ್ ಕನ್ನಡ 12’ ಆಟದಲ್ಲಿ 8 ಮಂದಿ ನಡುವೆ ಪೈಪೋಟಿ ಮುಂದುವರಿದಿದೆ. ಧ್ರುವಂತ್ ಹಾಗೂ ರಘು ಜಗಳ ಮಾಡಿಕೊಂಡಿದ್ದಾರೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ಈ ಸಂದರ್ಭದಲ್ಲಿ ಅವರಿಬ್ಬರು ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದಾರೆ. ಪ್ರೋಮೋ ಇಲ್ಲಿದೆ ನೋಡಿ..
‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಆಟದಲ್ಲಿ ಈಗ 8 ಜನರ ನಡುವೆ ಪೈಪೋಟಿ ಮುಂದುವರಿದಿದೆ. ಧ್ರುವಂತ್ ಮತ್ತು ಮ್ಯೂಟೆಂಟ್ ರಘು (Mutant Raghu) ಜಗಳ ಮಾಡಿಕೊಂಡಿದ್ದಾರೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಅವರಿಬ್ಬರು ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದಾರೆ. ಇಬ್ಬರೂ ಕೂಡ ವೈಯಕ್ತಿಕ ವಿಚಾರಗಳನ್ನು ಇಟ್ಟುಕೊಂಡು ಕಿತ್ತಾಡಿದ್ದಾರೆ. ನಾಮಿನೇಷನ್ ಪ್ರಕ್ರಿಯೆ ವೇಳೆ ಈ ಜಗಳ ನಡೆದಿದೆ. ಕಳೆದ ವಾರ ಸ್ಪಂದನಾ ಸೋಮಣ್ಣ ಅವರು ಎಲಿಮಿನೇಟ್ ಆದರು. ಮುಂದಿನ ವಾರ ಬಿಗ್ ಬಾಸ್ ಮನೆಯಿಂದ ಯಾರಿಗೆ ಗೇಟ್ ಪಾಸ್ ನೀಡಲಾಗುತ್ತದೆ ಎಂಬುದನ್ನು ತಿಳಿಯುವ ಕೌತುಕ ಹೆಚ್ಚಾಗಿದೆ. ಜನವರಿ 5ರ ಬಿಗ್ ಬಾಸ್ ಸಂಚಿಕೆಯ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

