AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಶಿಕ್ಷಕರ ಕ್ಷೇತ್ರದ ಎಂಎಲ್‌ಸಿ ಚುನಾವಣೆ: ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!

ಬೆಂಗಳೂರು ಶಿಕ್ಷಕರ ಕ್ಷೇತ್ರದ ಎಂಎಲ್‌ಸಿ ಚುನಾವಣೆ: ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!

ಕಿರಣ್​ ಹನಿಯಡ್ಕ
| Edited By: |

Updated on: Oct 23, 2026 | 11:45 AM

Share

ಬೆಂಗಳೂರು ಶಿಕ್ಷಕರ ಕ್ಷೇತ್ರದ ಎಂಎಲ್‌ಸಿ ಚುನಾವಣಾ ಮತದಾನದ ವೇಳೆ ನಾಗರಬಾವಿಯ ಅಂಬೇಡ್ಕರ್ ಕಾಲೇಜಿನ ಬಳಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಸಂಭವಿಸಿದೆ. ಮಾಜಿ ಕಾರ್ಪೊರೇಟರ್ ಮೋಹನ್ ಕುಮಾರ್ ಅವರಿಗೆ ಬಿಜೆಪಿ ಕಾರ್ಯಕರ್ತರು ನಿಂದಿಸಿದ್ದಾರೆ ಎಂಬ ಆರೋಪದಿಂದ ವಾಗ್ವಾದ ಶುರುವಾಗಿದೆ. ಪರಿಸ್ಥಿತಿ ತಾರಕಕ್ಕೇರಿದ್ದರಿಂದ ಪೊಲೀಸರು ಮಧ್ಯಪ್ರವೇಶಿಸಿ ತಿಳಿಗೊಳಿಸಿದ್ದಾರೆ. ಮತದಾನ ಪ್ರಕ್ರಿಯೆ ಯಾವುದೇ ಅಡ್ಡಿಯಿಲ್ಲದೆ ಮುಂದುವರಿದಿದೆ.

ಬೆಂಗಳೂರು, ಅಕ್ಟೋಬರ್ 23: ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಮತದಾನದ ಸಂದರ್ಭದಲ್ಲಿ ನಾಗರಬಾವಿಯ ಅಂಬೇಡ್ಕರ್ ಕಾಲೇಜಿನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಮತದಾನ ನಡೆಯುತ್ತಿದ್ದ ವೇಳೆ ಈ ಘಟನೆ ವರದಿಯಾಗಿದೆ. ಕೊಟ್ಟಿಗೆಪಾಳ್ಯದ ಮಾಜಿ ಕಾರ್ಪೊರೇಟರ್ ಹಾಗೂ ಕಾಂಗ್ರೆಸ್ ನಾಯಕರಾದ ಮೋಹನ್ ಕುಮಾರ್ ಅವರಿಗೆ ಬಿಜೆಪಿ ಕಾರ್ಯಕರ್ತರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಇದರಿಂದ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು ತಾರಕಕ್ಕೇರಿ ಗಲಾಟೆಗೆ ತಿರುಗಿದೆ.

ಪರಿಸ್ಥಿತಿ ಉದ್ವಿಗ್ನಗೊಂಡಾಗ ಸ್ಥಳಕ್ಕೆ ಧಾವಿಸಿದ ಪೊಲೀಸರು ಮಧ್ಯಪ್ರವೇಶಿಸಿ, ಎರಡೂ ಪಕ್ಷಗಳ ಕಾರ್ಯಕರ್ತರನ್ನು ಚದುರಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಕೆಲ ಸಮಯದ ಗೊಂದಲದ ನಂತರ, ಅಂಬೇಡ್ಕರ್ ಕಾಲೇಜಿನಲ್ಲಿ ಮತದಾನ ಪ್ರಕ್ರಿಯೆಯು ಯಾವುದೇ ಅಡಚಣೆಯಿಲ್ಲದೆ ಸುಗಮವಾಗಿ ಮುಂದುವರಿದಿದೆ ಎಂದು ವರದಿಯಾಗಿದೆ. ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಈ ಮತಗಟ್ಟೆಯಲ್ಲಿ ಸದ್ಯ ಶಾಂತಿಯುತವಾಗಿ ಮತದಾನ ಸಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಿರಣ್​ ಹನಿಯಡ್ಕ
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More