1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ

Updated on: Mar 26, 2026 | 10:01 PM

ಶಾಲೆ ದಾಖಲಿಗೆ ಮಕ್ಕಳಿಗೆ ನಿಗದಿಪಡಿಸಿದ್ದ ವಯೋಮಿತಿಯನ್ನು ಸರ್ಕಾರ ಸಡಿಲಿಕೆ ಮಾಡಿದೆ. 1 ನೇ ತರಗತಿಗೆ 6 ವರ್ಷ ತುಂಬಿರಬೇಕು ಎಂಬ ನಿಯಮದಲ್ಲಿ 60 ದಿನ ವಿನಾಯಿತಿ ನೀಡಲಾಗಿದೆ. ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು (ಮಾರ್ಚ್ 26)ವಿಧಾನಸಭೆಯಲ್ಲಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಯುಕೆಜಿ ಮುಗಿಸಿದರೂ 6 ವರ್ಷ ಪೂರ್ಣಗೊಂಡಿಲ್ಲವೆಂದು ಚಿಂತೆಯಲ್ಲಿದ್ದ  ಪೋಷಕರು ನಿರಾಳರಾಗಿದ್ದಾರೆ.

ಬೆಂಗಳೂರು, (ಮಾರ್ಚ್ 26): ಶಾಲೆ ದಾಖಲಿಗೆ ಮಕ್ಕಳಿಗೆ ನಿಗದಿಪಡಿಸಿದ್ದ ವಯೋಮಿತಿಯನ್ನು ಸರ್ಕಾರ ಸಡಿಲಿಕೆ ಮಾಡಿದೆ. 1 ನೇ ತರಗತಿಗೆ 6 ವರ್ಷ ತುಂಬಿರಬೇಕು ಎಂಬ ನಿಯಮದಲ್ಲಿ 60 ದಿನ ವಿನಾಯಿತಿ ನೀಡಲಾಗಿದೆ. ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು (ಮಾರ್ಚ್ 26)ವಿಧಾನಸಭೆಯಲ್ಲಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಯುಕೆಜಿ ಮುಗಿಸಿದರೂ 6 ವರ್ಷ ಪೂರ್ಣಗೊಂಡಿಲ್ಲವೆಂದು ಚಿಂತೆಯಲ್ಲಿದ್ದ  ಪೋಷಕರು ನಿರಾಳರಾಗಿದ್ದಾರೆ.

ಗುರುವಾರ ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ, ಪ್ರಸಕ್ತ ವರ್ಷಕ್ಕೆ ಅನ್ವಯವಾಗುವಂತೆ ಮಕ್ಕಳ ಶಾಲಾ ಪ್ರವೇಶಕ್ಕೆ ನಿಗದಿಪಡಿಸಿದ್ದ 6 ವರ್ಷಗಳ ವಯೋಮಿತಿಗೆ 60 ದಿನಗಳ ಕಾಲ ವಿನಾಯಿತಿ ನೀಡಲಾಗಿದೆ. ಪ್ರತಿ ವರ್ಷ ಪೋಷಕರಿಗೆ ಈ ಬಗ್ಗೆ ಗೊಂದಲವಾಗುತ್ತಿದೆ. ಎಲ್‌ಕೆಜಿ ಮತ್ತು ಯುಕೆಜಿ ಸೇರ್ಪಡೆಗೆ ಸೂಕ್ತ ವಯೋಮಿತಿ ಕಾನೂನು ಇಲ್ಲದಿರುವುದು ಇದಕ್ಕೆ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಎಲ್‌ಕೆಜಿ, ಯುಕೆಜಿ ಸೇರ್ಪಡೆಗೆ ಸಂಬಂಧಿಸಿದಂತೆ ಕಾನೂನು ಜಾರಿ ಮಾಡುತ್ತೇವೆ. ಈ ಬಗ್ಗೆ ಅಗತ್ಯ ಸಭೆ ನಡೆಸಲಾಗುತ್ತದೆ ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More