13 ವರ್ಷದ 7ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಚಾಪಾಲಿ ಗವಳಿವಾಡದಲ್ಲಿ 13 ವರ್ಷದ ಗಂಗುಕವಳಿ ಎಂಬ 7ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಯಾವುದೇ ಪೂರ್ವ ಕಾಯಿಲೆ ಅಥವಾ ಹೃದಯ ಸಂಬಂಧಿ ಸಮಸ್ಯೆ ಇಲ್ಲದ ಬಾಲಕಿ, ವಾಂತಿ ಮಾಡಿದ ಕೆಲವೇ ಕ್ಷಣಗಳಲ್ಲಿ ಅಸುನೀಗಿದ್ದಾರೆ. ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರ ಕನ್ನಡ, ಮೇ.3: ಜಿಲ್ಲೆಯ ಜೋಯಿಡಾ ತಾಲೂಕಿನ ಚಾಪಾಲಿ ಗವಳಿವಾಡದಲ್ಲಿ ಒಂದು ಹೃದಯವಿದ್ರಾವಕ ಘಟನೆ ಸಂಭವಿಸಿದೆ. 13 ವರ್ಷದ ಗಂಗುಕವಳಿ ಎಂಬ 7ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ. ಈ ಘಟನೆ ಗ್ರಾಮದಲ್ಲಿ ದುಃಖದ ವಾತಾವರಣ ಸೃಷ್ಟಿಸಿದೆ.ಮೃತ ವಿದ್ಯಾರ್ಥಿನಿಗೆ ಯಾವುದೇ ರೀತಿಯ ಕಾಯಿಲೆಗಳು ಇರಲಿಲ್ಲ ಎಂದು ತಿಳಿದುಬಂದಿದೆ. ಆಕೆಗೆ ಹೃದಯ ಸಂಬಂಧಿ ಸಮಸ್ಯೆಗಳೂ ಇರಲಿಲ್ಲ ಎನ್ನಲಾಗಿದೆ. ಗಂಗುಕವಳಿ ಎಲ್ಲಾ ಮಕ್ಕಳಂತೆ ಪ್ರತಿದಿನ ಆಟಪಾಠಗಳಲ್ಲಿ ತೊಡಗಿಕೊಳ್ಳುತ್ತಿದ್ದಳು. ಸಾವಿಗೂ ಹಿಂದಿನ ದಿನ ಸಂಜೆಯವರೆಗೂ ಆಟವಾಡಿ ಸಂತೋಷದಿಂದಿದ್ದಳು. ಆದರೆ, ಮರುದಿನ ಬೆಳಗ್ಗೆ ವಾಂತಿ ಮಾಡಿದ ಕೆಲವೇ ಕ್ಷಣಗಳಲ್ಲಿ ಆಕೆ ಅಸುನೀಗಿದ್ದಾಳೆ. ಈ ಆಘಾತಕಾರಿ ಘಟನೆ ಕುರಿತು ರಾಮನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಾಲಕಿಯ ಅಕಾಲಿಕ ಮರಣಕ್ಕೆ ಕಾರಣ ಏನೆಂದು ತಿಳಿಯಲು ತನಿಖೆ ನಡೆಯುತ್ತಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್ ಪಲ್ಟಿ: ತಪ್ಪಿದ ಭಾರಿ ಅನಾಹುತ

