Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು

Updated on: Dec 14, 2025 | 8:41 AM

ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿವೆ. ಜಿಮ್​ನಲ್ಲಿ, ಮದುವೆ ಸಮಾರಂಭಗಳಲ್ಲಿ ನೃತ್ಯ ಮಾಡುತ್ತಿದ್ದವರು ಹೀಗೆ ಹತ್ತು ಹಲವು ಪ್ರಕರಣಗಳು ನಮ್ಮ ಕಣ್ಣಮುಂದಿವೆ. ಕೋನಸೀಮಾದಲ್ಲಿ ತರಗತಿಯಲ್ಲಿ ಪಾಠ ಕೇಳುತ್ತಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ನಲ್ಲಮಿಲ್ಲಿ ಸಿರಿ ಎಂಬ ವಿದ್ಯಾರ್ಥಿನಿ ತರಗತಿಯಲ್ಲಿ ಹೃದಯಾಘಾತಕ್ಕೊಳಗಾಗಿದ್ದಾರೆ. ಆಘಾತಕಾರಿ ಘಟನೆ ತರಗತಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಶನಿವಾರ ಬೆಳಗ್ಗೆ 9.45 ರ ಸುಮಾರಿಗೆ ಈ ಘಟನೆ ನಡೆದಿದೆ. ಮೊದಲ ಬೆಂಚಿನಲ್ಲಿ ಕುಳಿತಿದ್ದ ಹುಡುಗಿ ಇದ್ದಕ್ಕಿದ್ದಂತೆ ಕುಸಿದು ಬೀಳುವುದನ್ನು ವೀಡಿಯೊದಲ್ಲಿ ಕಾಣಬಹುದು.

ಕೋನಸೀಮಾ, ಡಿಸೆಂಬರ್ 14: ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿವೆ. ಜಿಮ್​ನಲ್ಲಿ, ಮದುವೆ ಸಮಾರಂಭಗಳಲ್ಲಿ ನೃತ್ಯ ಮಾಡುತ್ತಿದ್ದವರು ಹೀಗೆ ಹತ್ತು ಹಲವು ಪ್ರಕರಣಗಳು ನಮ್ಮ ಕಣ್ಣಮುಂದಿವೆ. ಕೋನಸೀಮಾದಲ್ಲಿ ತರಗತಿಯಲ್ಲಿ ಪಾಠ ಕೇಳುತ್ತಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ನಲ್ಲಮಿಲ್ಲಿ ಸಿರಿ ಎಂಬ ವಿದ್ಯಾರ್ಥಿನಿ ತರಗತಿಯಲ್ಲಿ ಹೃದಯಾಘಾತಕ್ಕೊಳಗಾಗಿದ್ದಾರೆ. ಆಘಾತಕಾರಿ ಘಟನೆ ತರಗತಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಶನಿವಾರ ಬೆಳಗ್ಗೆ 9.45 ರ ಸುಮಾರಿಗೆ ಈ ಘಟನೆ ನಡೆದಿದೆ. ಮೊದಲ ಬೆಂಚಿನಲ್ಲಿ ಕುಳಿತಿದ್ದ ಹುಡುಗಿ ಇದ್ದಕ್ಕಿದ್ದಂತೆ ಕುಸಿದು ಬೀಳುವುದನ್ನು ವೀಡಿಯೊದಲ್ಲಿ ಕಾಣಬಹುದು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More