ಎಮ್ಇಎಸ್ ಪುಂಡರ ಕೃತ್ಯ ಖಂಡಿಸಿ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ; ನೇರ ದೃಶ್ಯ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Edited By:

Updated on: Dec 20, 2021 | 12:48 PM

Belagavi Violence: ಕರವೇ ನಡೆ ಬೆಳಗಾವಿ ಕಡೆ ಸ್ಲೋಗನ್ ಅಡಿಯಲ್ಲಿ ಕಾರ್ಯಕರ್ತರು ಹೊರಟ ನಡೆಸುತ್ತಿದ್ದಾರೆ. ಪಾದಯಾತ್ರೆ ಮೂಲಕ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಕಾರ್ಯಕರ್ತರು ನಿರ್ಧರಿಸಿದ್ದಾರೆ.

ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಧ್ವಂಸಗೊಳಿಸಿದ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮತ್ತು ಶಿವಸೇನೆ ಕಾರ್ಯಕರ್ತರ ಕೃತ್ಯ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಇಂದು ಬೆಳಗಾವಿಗೆ ಧಾವಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಎಂಇಎಸ್ ಮತ್ತು ಶಿವಸೇನೆಯನ್ನು ಭಯೋತ್ಪಾದಕ ಗುಂಪುಗಳು ಎಂದು ಕರೆದಿರುವ ಕರವೇ, ಬೃಹತ್ ಪಾದಯಾತ್ರೆ ನಡೆಸುತ್ತಿದೆ. ಕರವೇ ನಡೆ ಬೆಳಗಾವಿ ಕಡೆ ಸ್ಲೋಗನ್ ಅಡಿಯಲ್ಲಿ ಕಾರ್ಯಕರ್ತರು ಹೊರಟ ನಡೆಸುತ್ತಿದ್ದಾರೆ. ಪಾದಯಾತ್ರೆ ಮೂಲಕ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಕಾರ್ಯಕರ್ತರು ನಿರ್ಧರಿಸಿದ್ದಾರೆ. ಪ್ರತಿಭಟನೆಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಈಗಾಗಲೇ ಕರವೇ ಅಧ್ಯಕ್ಷ ನಾರಾಯಣಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.