ಪುರಾಣ ಪ್ರಸಿದ್ಧ ಹಾಸನಾಂಬೆ ದರ್ಶನೋತ್ಸವ ಲೈವ್ ನೋಡಲು ಇಲ್ಲಿ ಕ್ಲಿಕ್ ಮಾಡಿ

Hasanamba Temple: ಎರಡು ಡೋಸ್ ಲಸಿಕೆ ಪಡೆದ ಬಗ್ಗೆ ಪ್ರಮಾಣ ಪತ್ರ ನೀಡಿದರೆ ದರ್ಶನಕ್ಕೆ ಅವಕಾಶ ನೀಡಲಾಗುವುದು. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಬ್ಯಾರಿಕೇಡ್ ನಡುವೆ ಚೇರ್​ಗಳ ವ್ಯವಸ್ಥೆ ಮಾಡಲಾಗಿದೆ.

ಇಂದಿನಿಂದ ಹಾಸನಾಂಬೆ ದರ್ಶನೋತ್ಸವ ಆರಂಭವಾಗುತ್ತಿದೆ. ಎರಡು ವರ್ಷಗಳ ಬಳಿಕ ಹಾಸನಾಂಬೆ ದರ್ಶನಕ್ಕೆ ಭಕ್ತರು ಕಾತರರಾಗಿದ್ದಾರೆ. ಉಸ್ತುವಾರಿ ಸಚಿವ ಗೋಪಾಲಯ್ಯ ದೇವಾಲಯ ಕ್ಕೆ ಆಗಮಿಸಿದ್ದಾರೆ. ಡಿಸಿ ಆರ್ ಗಿರೀಶ್, ಎಸ್​ಪಿ ಶ್ರೀನಿವಾಸ ಗೌಡ ಉಪಸ್ಥಿತರಾಗಿದ್ದಾರೆ. ದೇಗುಲದ ಗರ್ಭಗುಡಿ ಮುಂದೆ ಪೂಕಾ ಕೈಂಕರ್ಯ ಆರಂಭವಾಗಿದೆ. ಪ್ರಧಾನ ಅರ್ಚಕ ನಾಗರಾಜ್ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನೆರವೇರುತ್ತಿದೆ. ಇಂದು 12 ಗಂಟೆಗೆ ಹಾಸನಾಂಬೆ ದೇಗುಲದ ಬಾಗಿಲು ತೆರೆಯಲಿದೆ. ಹಾಸನಾಂಬೆ ದರ್ಶನಕ್ಕೆ ಬರುವ ಭಕ್ತರಿಗೆ ಕೊವಿಡ್ ವ್ಯಾಕ್ಸಿನ್ ಪ್ರಮಾಣ ಪತ್ರ ಕಡ್ಡಾಯ ಮಾಡಲಾಗಿದೆ. ಎರಡು ಡೋಸ್ ಲಸಿಕೆ ಪಡೆದ ಬಗ್ಗೆ ಪ್ರಮಾಣ ಪತ್ರ ನೀಡಿದರೆ ದರ್ಶನಕ್ಕೆ ಅವಕಾಶ ನೀಡಲಾಗುವುದು. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಬ್ಯಾರಿಕೇಡ್ ನಡುವೆ ಚೇರ್ಗಳ ವ್ಯವಸ್ಥೆ ಮಾಡಲಾಗಿದೆ. ನಾಳೆ ಬೆಳಿಗ್ಗೆ 6 ಗಂಟೆಯಿಂದ ಸಾರ್ವಜನಿಕ ದರ್ಶನಕ್ಕೆ ಅವಕಾಶ ಸಿಗಲಿದೆ.

Click on your DTH Provider to Add TV9 Kannada