ಕಾಂಗ್ರೆಸ್ ನಾಯಕರ ಮೇಕೆದಾಟು ಪಾದಯಾತ್ರೆಯ ನೇರ ದೃಶ್ಯಾವಳಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
ಪಾದಯಾತ್ರೆಯಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ. ಕಾರ್ಯಕರ್ತರು ರಾಷ್ಟ್ರಧ್ವಜ ಹಿಡಿದು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದಾರೆ.
ಮೇಕೆದಾಟು (Mekedatu) ಯೋಜನೆ ಆಗ್ರಹಿಸಿ ಕಾಂಗ್ರೆಸ್ (Congress) ನಾಯಕರು ಪಾದಯಾತ್ರೆ ನಡೆಸುತ್ತಿದ್ದಾರೆ. ಕೊರೊನಾ ಕಾರಣದಿಂದ ಅರ್ಧಕ್ಕೆ ನಿಂತಿದ್ದ ಪಾದಯಾತ್ರೆ ಇಂದಿನಿಂದ ಮತ್ತೆ ಆರಂಭಗೊಂಡಿದೆ. ಪಾದಯಾತ್ರೆಯಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ. ಕಾರ್ಯಕರ್ತರು ರಾಷ್ಟ್ರಧ್ವಜ ಹಿಡಿದು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದಾರೆ. ನಡೆದು ಸುಸ್ತಾದ ನಾಯಕರು ಮತ್ತು ಕಾರ್ಯಕರ್ತರು ಕಲ್ಲಂಗಡಿ ಜ್ಯೂಸ್, ಬಾಳೆ ಹಣ್ಣು ಸೇವಿಸುತ್ತಿದ್ದಾರೆ. ಡಬಲ್ ಇಂಜಿನ್ ಸರ್ಕಾರ ಎಂದು ಹೇಳುತ್ತಾರೆ. ಈ ಸರ್ಕಾರ 2 ದಿನದಲ್ಲಿ ಅನುಮತಿ ಕೊಡಿಸಲಿ. ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲಿ. ನಾವೆಲ್ಲಾ ಸೇರಿಕೊಂಡು ಶಂಕುಸ್ಥಾಪನೆ ಮಾಡೋಣ ಅಂತ ರಾಮನಗರದಲ್ಲಿ ನಡೆದ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.