Video: ಪ್ರಯಾಗ್​ರಾಜ್​ನಲ್ಲಿ ವಾಯುಪಡೆಯ ಸಣ್ಣ ವಿಮಾನ ಪತನ

Updated on: Jan 21, 2026 | 1:56 PM

ಭಾರತೀಯ ವಾಯುಪಡೆಯ (ಐಎಎಫ್) ಮೈಕ್ರೋಲೈಟ್ ವಿಮಾನವು ಬುಧವಾರ (ಜನವರಿ 21) ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪತನಗೊಂಡಿದೆ. ಇಬ್ಬರೂ ಪೈಲಟ್‌ಗಳು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ನಡೆದಿದೆ. ಪ್ರಯಾಗ್‌ರಾಜ್‌ನಿಂದ ಸುಮಾರು 12 ಕಿ.ಮೀ ದೂರದಲ್ಲಿರುವ ಕೆ.ಪಿ. ಕಾಲೇಜು ಬಳಿ ವಿಮಾನವು ಕೆರೆಗೆ ಅಪ್ಪಳಿಸಿದೆ.

ಪ್ರಯಾಗ್​ರಾಜ್, ಜನವರಿ 21: ಭಾರತೀಯ ವಾಯುಪಡೆಯ (ಐಎಎಫ್) ಮೈಕ್ರೋಲೈಟ್ ವಿಮಾನವು ಬುಧವಾರ  ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪತನಗೊಂಡಿದೆ. ಇಬ್ಬರೂ ಪೈಲಟ್‌ಗಳು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ನಡೆದಿದೆ. ಪ್ರಯಾಗ್‌ರಾಜ್‌ನಿಂದ ಸುಮಾರು 12 ಕಿ.ಮೀ ದೂರದಲ್ಲಿರುವ ಕೆ.ಪಿ. ಕಾಲೇಜು ಬಳಿ ವಿಮಾನವು ಕೆರೆಗೆ ಅಪ್ಪಳಿಸಿದೆ. ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.. ವಿಮಾನ ಪತನಗೊಳ್ಳುತ್ತಿದ್ದಂತೆ ಸ್ಥಳೀಯರಿಗೆ ದೊಡ್ಡ ಶಬ್ದ ಕೇಳಿಬಂದಿದೆ. ಈ ಘಟನೆಯಿಂದ ಆ ಪ್ರದೇಶದಲ್ಲಿ ಭಯd ವಾತಾವರಣ ನಿರ್ಮಾಣವಾಗಿತ್ತು. ಸ್ಥಳೀಯರು ತಕ್ಷಣ ಸ್ಥಳಕ್ಕೆ ಹೋಗಿ  ಇಬ್ಬರೂ ಪೈಲಟ್‌ಗಳನ್ನು ನೀರಿನಿಂದ ಹೊರಬರಲು ಸಹಾಯ ಮಾಡಿದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More