ಕೋಲಾರ: ಮಾಲೂರು ಚಿಕ್ಕತಿರುಪತಿ ದೇವಸ್ಥಾನದಲ್ಲಿ ಸಂಗ್ರಹವಾಗಿರುವ ಮೂರು ತಿಂಗಳ ಹುಂಡಿ ಕಾಣಿಕೆ ಎಷ್ಟು ಗೊತ್ತಾ?

ಅರುಣ್​ ಕುಮಾರ್​ ಬೆಳ್ಳಿ

Updated on: Mar 05, 2025 | 10:17 AM

ಮಾಹಿತಿಯ ಪ್ರಕಾರ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಶಕ್ತಿ ಯೋಜನೆಯನ್ನು ಜಾರಿಗೊಳಿಸಿದ ಬಳಿಕ ಮಹಿಳೆಯರು ಕರ್ನಾಟಕದ ನಾನಾ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸುವುದು ಅರ್ಚನೆ ಮಾಡಿಸುವುದು ಹೆಚ್ಚಾಗಿದೆ. ಮಾಲೂರುನಲ್ಲಿರುವ ಚಿಕ್ಕತಿರುಪತಿ ದೇವಸ್ಥಾನಕ್ಕೆ ಮೊದಲಿಂದಲೂ ಅಪಾರ ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ.

ಕೋಲಾರ, ಮಾರ್ಚ್ 5 : ಜಿಲ್ಲೆಯ ಮಾಲೂರು ಪಟ್ಟಣದ ಚಿಕ್ಕತಿರುಪತಿ ದೇವಸ್ಥಾನಕ್ಕೆ (Chikka Tirupati Temple) ಭೇಟಿ ನೀಡಿ ಪೂಜೆ ಸಲ್ಲಿಸುವ ಭಕ್ತರ ಸಂಖ್ಯೆ ಅಪರಿಮಿತ ಎಂದು ವರದಿ ಮಾಡಿದ್ದೇವೆ. ಅದಕ್ಕೆ ಮತ್ತೊಂದು ನಿದರ್ಶನವೆಂದರೆ ಕಳೆದ ಮೂರು ತಿಂಗಳಲ್ಲಿ ಭಕ್ತರು ದೇವಸ್ಥಾನದ ಹುಂಡಿಯಲ್ಲಿ ಹಾಕಿರುವ ಕಾಣಿಕೆ. ದೇವಸ್ಥಾನದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸೆಲ್ವಮಣಿ ನೇತೃತ್ವದಲ್ಲಿ ನಿನ್ನೆ ಹುಂಡಿ ಕಾಣಿಕೆ ಎಣಿಕೆ ಕಾರ್ಯ ನಡೆಸಲಾಗಿದ್ದು ₹49,09,660 ಹಣ, 35 ಗ್ರಾಂ ಚಿನ್ನ, 184 ಗ್ರಾಂ ಬೆಳ್ಳಿ ಮತ್ತು ವಿದೇಶೀ ಕರೆನ್ಸಿ ಕೂಡ ಸಂಗ್ರಹವಾಗಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  Daily Devotional: ದೇವಸ್ಥಾನದಲ್ಲಿ ಎಡಗಡೆಯಿಂದ ಪ್ರದಕ್ಷಿಣೆ ಹಾಕುವ ಮಹತ್ವ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.