AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Huligemma Temple: ಕೊಪ್ಪಳದ ಹುಲಿಗೆಮ್ಮ ದೇವಸ್ಥಾನದ ಹುಂಡಿಯಲ್ಲಿ 1 ತಿಂಗಳಲ್ಲಿ ಸಂಗ್ರಹವಾಗಿರುವ ಕಾಣಿಕೆ ರೂ. 1 ಕೋಟಿ!

Huligemma Temple: ಕೊಪ್ಪಳದ ಹುಲಿಗೆಮ್ಮ ದೇವಸ್ಥಾನದ ಹುಂಡಿಯಲ್ಲಿ 1 ತಿಂಗಳಲ್ಲಿ ಸಂಗ್ರಹವಾಗಿರುವ ಕಾಣಿಕೆ ರೂ. 1 ಕೋಟಿ!

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Jun 29, 2023 | 10:48 AM

Share

ಸರ್ಕಾರ ಗೃಹ ಲಕ್ಷ್ಮಿ ಮತ್ತು ಶಕ್ತಿ ಯೋಜನೆ ಜಾರಿಗೊಳಿಸಿದಾಗಿನಿಂದ ಗುಡಿಗೆ ಭೇಟಿ ನೀಡುವ ಭಕ್ತಾದಿಗಳ ಸಂಖ್ಯೆ ಜಾಸ್ತಿಯಾಗಿದೆಯಂತೆ.

ಕೊಪ್ಪಳ: ದೇವಸ್ಥಾನಗಳಲ್ಲಿ ದೇವ ದೇವತೆಯರಿಗೆ ಕಾಣಿಕೆ ನೀಡುವ ವಿಷಯದಲ್ಲಿ ಕನ್ನಡಿಗರು ಧಾರಾಳಿಗಳು ಅದರಲ್ಲಿ ಅನುಮಾನ ಬೇಡ. ಕೊಪ್ಪಳ ತಾಲ್ಲೂಕಿನ ಹುಲಿಗಿ ಗ್ರಾಮದಲ್ಲಿರುವ ಹುಲಿಗೆಮ್ಮ ದೇವಸ್ಥಾನ (Huligemma temple) ಸಾಕಷ್ಟು ಪ್ರಸಿದ್ಧಿ ಹೊಂದಿರುವಂಥದ್ದು ಮತ್ತು ಪ್ರತಿದಿನ ನೂರಾರು ಭಕ್ತರು ದೇವಿಯ ದರ್ಶನಕ್ಕೆ ಬರುತ್ತಾರೆ. ಕಳೆದ 33 ದಿನಗಳಲ್ಲಿ ದೇವಸ್ಥಾನದ ಹುಂಡಿಯಲ್ಲಿ (offertory box) ಸಂಗ್ರಹವಾಗಿರುವ ಕಾಣಿಕೆ ಮೊತ್ತ ನೋಡಿದರೆ ಹುಲಿಗೆಮ್ಮ ದೇವಿಯ ಖ್ಯಾತಿ ಗೊತ್ತಾಗುತ್ತದೆ. ದೇವಸ್ಥಾನದ ಆಡಳಿತ ಮಂಡಳಿ (temple trust) ನೀಡಿರುವ ಮಾಹಿತಿಯ ಪ್ರಕಾರ 33 ದಿನಗಳಲ್ಲಿ ರೂ. 99, 69,725 ಮತ್ತು 225 ಗ್ರಾಂ ಚಿನ್ನ ಹಾಗೂ 14 ಕೆಜಿ ಬೆಳ್ಳಿ ಸಂಗ್ರಹವಾಗಿದೆ. ಸರ್ಕಾರ ಗೃಹ ಲಕ್ಷ್ಮಿ ಮತ್ತು ಶಕ್ತಿ ಯೋಜನೆ ಜಾರಿಗೊಳಿಸಿದಾಗಿನಿಂದ ಗುಡಿಗೆ ಭೇಟಿ ನೀಡುವ ಭಕ್ತಾದಿಗಳ ಸಂಖ್ಯೆ ಜಾಸ್ತಿಯಾಗಿದೆಯಂತೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.