ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ

ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
|

Updated on:Oct 06, 2024 | 7:38 PM

ಪಶ್ಚಿಮ ಘಟ್ಟದ ತಪ್ಪಲು ಹೆಬ್ರಿಯಲ್ಲಿ ಮಧ್ಯಾಹ್ನ 4.30 ರ ಸುಮಾರಿಗೆ ಮೇಘಸ್ಫೋಟ(cloudburst)ವಾಗಿದ್ದು, ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ಹಠಾತ್ ಜಲ ಪ್ರವಾಹ ಉಂಟಾಗಿದೆ. ಪರಿಣಾಮ ಬಲ್ಲಾಡಿಯ ಈಶ್ವರನಗರ ಸಮೀಪದ ಬಮ್ಮಗುಂಡಿ ಹೊಳೆ ಉಕ್ಕಿ ಹರಿದು ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಭಾರೀ ಆವಾಂತರ ಸೃಷ್ಟಿಯಾಗಿದೆ.

ಉಡುಪಿ, ಅ.06: ಪಶ್ಚಿಮ ಘಟ್ಟದ ತಪ್ಪಲು ಹೆಬ್ರಿಯಲ್ಲಿ ಮಧ್ಯಾಹ್ನ 4.30 ರ ಸುಮಾರಿಗೆ ಮೇಘಸ್ಫೋಟ(cloudburst)ವಾಗಿದ್ದು, ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ಹಠಾತ್ ಜಲ ಪ್ರವಾಹ ಉಂಟಾಗಿದೆ. ಪರಿಣಾಮ ಬಲ್ಲಾಡಿಯ ಈಶ್ವರನಗರ ಸಮೀಪದ ಬಮ್ಮಗುಂಡಿ ಹೊಳೆ ಉಕ್ಕಿ ಹರಿದು ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಭಾರೀ ಆವಾಂತರ ಸೃಷ್ಟಿಯಾಗಿದೆ. ಜೊತೆಗೆ ಭಾರೀ ನೆರೆಯಿಂದ ಕೊಚ್ಚಿ ಹೋದ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಎರಡು ಕಾರು ಹಾಗೂ ಎರಡು ಬೈಕ್‌’ಗಳು ಕೊಚ್ಚಿಹೋಗಿವೆ. ಕಬ್ಬಿನಾಲೆ ಭಾಗದ ಪರ್ವತ ಸಾಲಿನಲ್ಲಿ ಮೇಘ ಸ್ಫೋಟವಾಗಿ ಈ ಭೀಕರ ಪ್ರವಾಹ ಸೃಷ್ಟಿಯಾಗಿದ್ದು, ಸ್ಥಳಿಯರಿಂದ ರಕ್ಷಣೆ ಕಾರ್ಯಚರಣೆ ಮುಂದುವರೆದಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:37 pm, Sun, 6 October 24

Follow us