Loading video

Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ

Updated on: Jun 29, 2025 | 8:10 AM

ಉತ್ತರಾಖಂಡದ ಉತ್ತರ ಕಾಶಿಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, 9 ಮಂದಿ ನಾಪತ್ತೆಯಾಗಿದ್ದಾರೆ. ಬಾರ್ಕೋಟ್-ಯಮುನೋತ್ರಿ ರಸ್ತೆಯ ಬಾಲಿಗಢದಲ್ಲಿ ಭಾನುವಾರ ಬೆಳಿಗ್ಗೆ ಹಠಾತ್ ಮೇಘಸ್ಫೋಟ ಸಂಭವಿಸಿದ್ದು, ನಿರ್ಮಾಣ ಹಂತದಲ್ಲಿರುವ ಹೋಟೆಲ್​ಗೆ ಹಾನಿಯುಂಟಾಗಿದೆ. ಎಂಟರಿಂದ ಒಂಬತ್ತು ಕಾರ್ಮಿಕರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಪೊಲೀಸರು, ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡಗಳು ಸ್ಥಳಕ್ಕೆ ಆಗಮಿಸಿವೆ

ಉತ್ತರಕಾಶಿ, ಜೂನ್ 29: ಉತ್ತರಾಖಂಡದ ಉತ್ತರ ಕಾಶಿಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, 9 ಮಂದಿ ನಾಪತ್ತೆಯಾಗಿದ್ದಾರೆ. ಬಾರ್ಕೋಟ್-ಯಮುನೋತ್ರಿ ರಸ್ತೆಯ ಬಾಲಿಗಢದಲ್ಲಿ ಭಾನುವಾರ ಬೆಳಗ್ಗೆ ಹಠಾತ್ ಮೇಘಸ್ಫೋಟ ಸಂಭವಿಸಿದ್ದು, ನಿರ್ಮಾಣ ಹಂತದಲ್ಲಿರುವ ಹೋಟೆಲ್​ಗೆ ಹಾನಿಯುಂಟಾಗಿದೆ. ಎಂಟರಿಂದ ಒಂಬತ್ತು ಕಾರ್ಮಿಕರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಪೊಲೀಸರು, ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡಗಳು ಸ್ಥಳಕ್ಕೆ ಆಗಮಿಸಿವೆ.ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್​ ಘೋಷಿಸಿದೆ. ನಿರಂತರ ಮಳೆಯಿಂದಾಗಿ ನಂದಪ್ರಯಾಗ ಮತ್ತು ಭನೇರೋಪಾನಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ