Video: ಗೋವಾ ಕ್ಲಬ್​ನಲ್ಲಿ ಭೀಕರ ಅಗ್ನಿ ಅವಘಡ, ಪ್ರವಾಸಿಗರು ಸೇರಿ 25 ಮಂದಿ ಸಜೀವ ದಹನ, ವಿಡಿಯೋ ಇಲ್ಲಿದೆ

Updated on: Dec 07, 2025 | 8:55 AM

ಉತ್ತರ ಗೋವಾದ ಅರ್ಪೋರಾದಲ್ಲಿರುವ ರೋಮಿಯೋ ಲೇನ್‌ನ ಜನಪ್ರಿಯ ನೈಟ್‌ಕ್ಲಬ್ ಬಿರ್ಚ್‌ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಪ್ರವಾಸಿಗರು ಸೇರರಿ 25 ಮಂದಿ ಸಜೀವದಹನವಾಗಿದ್ದಾರೆ. 50 ಮಂದಿ ಗಾಯಗೊಂಡಿದ್ದಾರೆ. ಎಲ್ಲರು ಗೋವಾದ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರಲ್ಲಿ ಮೂರರಿಂದ ನಾಲ್ಕು ಮಂದಿ ಪ್ರವಾಸಿಗರು ಮತ್ತು ಕ್ಲಬ್​ನ 19 ಸಿಬ್ಬಂದಿ ಸೇರಿದ್ದಾರೆ. ಈ ಘಟನೆ ಬೆಳಗಿನ ಜಾವ ಸುಮಾರು 1 ಗಂಟೆ ವೇಳೆಗೆ ನಡೆದಿದೆ. ಅಡುಗೆ ಮನೆಯಲ್ಲಿ ಸಿಲಿಂಡರ್ ಸ್ಫೋಟವಾಗಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪೊಲೀಸರ ತಪಾಸಣೆ ಸಮಯದಲ್ಲಿ ಸಿಲಿಂಡರ್ ಹಾಗೆಯೇ ಇತ್ತು.

ಪಣಜಿ, ಡಿಸೆಂಬರ್ 07: ಉತ್ತರ ಗೋವಾದ ಅರ್ಪೋರಾದಲ್ಲಿರುವ ರೋಮಿಯೋ ಲೇನ್‌ನ ಪ್ರಸಿದ್ಧ  ನೈಟ್‌ಕ್ಲಬ್ ಬಿರ್ಚ್‌ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಪ್ರವಾಸಿಗರು ಸೇರಿ 25 ಮಂದಿ ಸಜೀವದಹನವಾಗಿದ್ದಾರೆ. 50 ಮಂದಿ ಗಾಯಗೊಂಡಿದ್ದಾರೆ. ಎಲ್ಲರು ಗೋವಾದ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರಲ್ಲಿ ಮೂರರಿಂದ ನಾಲ್ಕು ಮಂದಿ ಪ್ರವಾಸಿಗರು ಮತ್ತು ಕ್ಲಬ್​ನ 19 ಸಿಬ್ಬಂದಿ ಸೇರಿದ್ದಾರೆ. ಈ ಘಟನೆ ಬೆಳಗಿನ ಜಾವ ಸುಮಾರು 1 ಗಂಟೆ ವೇಳೆಗೆ ನಡೆದಿದೆ. ಅಡುಗೆ ಮನೆಯಲ್ಲಿ ಸಿಲಿಂಡರ್ ಸ್ಫೋಟವಾಗಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪೊಲೀಸರ ತಪಾಸಣೆ ಸಮಯದಲ್ಲಿ ಸಿಲಿಂಡರ್ ಹಾಗೆಯೇ ಇತ್ತು.

ಸ್ಫೋಟದ ತೀವ್ರತೆ ಎಷ್ಟು ಪ್ರಬಲವಾಗಿತ್ತೆಂದರೆ, ಜ್ವಾಲೆಗಳು ಕೆಲವೇ ಸೆಕೆಂಡುಗಳಲ್ಲಿ ಇಡೀ ಕಟ್ಟಡವನ್ನು ಆವರಿಸಿಕೊಂಡಿತ್ತು. ತಪ್ಪಿಸಿಕೊಳ್ಳಲು ಒಳಗಿರುವವರಿಗೆ ತುಂಬಾ ಕಡಿಮೆ ಸಮಯ ಇತ್ತು. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಗಾಯಗೊಂಡವರ ಸಂಖ್ಯೆ ಮತ್ತು ಸ್ಥಿತಿಯ ಕುರಿತು ಅಧಿಕೃತ ವಿವರಗಳು ಇನ್ನೂ ಲಭ್ಯವಿಲ್ಲ.ನೈಟ್‌ಕ್ಲಬ್ ಅನ್ನು ಸದ್ಯಕ್ಕೆ ಸೀಲ್ ಮಾಡಲಾಗಿದ್ದು, ಮಾಲೀಕರು ಮತ್ತು ಆಡಳಿತ ಮಂಡಳಿಯ ವಿಚಾರಣೆ ನಡೆಯುತ್ತಿದೆ. ಆರಂಭಿಕ ಮಾಹಿತಿಯ ಪ್ರಕಾರ, ಕ್ಲಬ್ ಅಗ್ನಿ ಸುರಕ್ಷತಾ ಮಾನದಂಡಗಳನ್ನು ಪಾಲಿಸಿರಲಿಲ್ಲ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Dec 07, 2025 07:43 AM