ಸಿಎಂ ಮತ್ತು ಡಿಸಿಎಂಗೆ ದೆಹಲಿಯಲ್ಲಿ ಕೇಂದ್ರ ಸರ್ಕಾರದ ಜೊತೆ ಹಲವಾರು ಕೆಲಸಗಳಿರುತ್ತವೆ: ಲಕ್ಷ್ಮಿ ಹೆಬ್ಬಾಳ್ಕರ್
ಎಐಸಿಸಿಯ ರಾಜ್ಯ ಉಸ್ತುವಾರಿ ರಂದೀಪ್ ಸುರ್ಜೇವಾಲಾ ಅವರು ಮೇಲಿಂದ ಮೇಲೆ ಬೆಂಗಳೂರಿಗೆ ಬಂದು ಶಾಸಕರೊಂದಿಗೆ ಪ್ರತ್ಯೇಕವಾಗಿ ಮುಖಾಮುಖಿಯಾಗಿ ಮಾತುಕತೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್, ಅದು ಕಾಂಗ್ರೆಸ್ ಪಕ್ಷದಲ್ಲಿ ನಿರಂತರವಾಗಿ ನಡೆಯುವ ಪ್ರಕ್ರಿಯೆ, ಪಕ್ಷದ ಕಾರ್ಯದರ್ಶಿಗಳು ಶಾಸಕರೊಂದಿಗೆ ಮಾತುಕತೆ ನಡೆಸಿ ಕುಂದುಕೊರತೆಗಳನ್ನು ವಿಚಾರಿಸುತ್ತಿರುತ್ತಾರೆ ಎಂದು ಹೇಳಿದರು.
ಧಾರವಾಡ, ಜುಲೈ 8: ಧಾರವಾಡ ಪ್ರವಾಸದಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ದೆಹಲಿ ಹೋಗಿರುವುದಕ್ಕೆ ಬಣ್ಣ ಕಟ್ಟುವುದು ಬೇಡ, ಅವರಿಬ್ಬರೂ ತಮ್ಮ ತಮ್ಮ ಕೆಲಸಗಳಿಗಾಗಿ ಹೋಗಿದ್ದಾರೆ, ಮಂತ್ರಿಗಳಾದವರಿಗೆ ಕೇಂದ್ರ ಸರ್ಕಾರದ ಜೊತೆ ಬಹಳಷ್ಟು ಕೆಲಸಗಳಿರುತ್ತವೆ, ತಾನು ಸಹ ಕೆಲಸದ ನಿಮಿತ್ತ ಆಗಾಗ್ಗೆ ದೆಹಲಿಗೆ ಹೋಗಬೇಕಾಗುತ್ತದೆ ಎಂದು ಹೇಳಿದರು. ವಿಪಕ್ಷದ ನಾಯಕರು ಏನಾದರೂ ಹೇಳುತ್ತಲೇ ಇರುತ್ತಾರೆ, ಕಾಂಗ್ರೆಸ್ ಪಕ್ಷಕ್ಕೆ 136 ಸೀಟುಗಳು ಬಂದಾಗ್ಯೂ ಅವರು ಸರ್ಕಾರ ಮೂರು ತಿಂಗಳು ಕೂಡ ಬಾಳಲ್ಲ ಎಂದಿದ್ದರು, ಅವರ ಮಾತು ಬಿಡಿ; ಮುಖ್ಯಮಂತ್ರಿ ಬದಲಾಗುವಂಥ ಸನ್ನಿವೇಶವೇ ಇಲ್ಲ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಇದನ್ನೂ ಓದಿ: ಎತ್ತಿನಹೊಳೆ ಯೋಜನೆಗೆ ಭಾರಿ ಹಿನ್ನಡೆ: ಹೆಚ್ಚುವರಿ ಅರಣ್ಯ ಬಳಕೆಗೆ ಅನುಮೋದನೆ ನಿರಾಕರಿಸಿದ ಕೇಂದ್ರ, ಇದೆ ಬಲವಾದ ಕಾರಣ
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
