ಶಿವಮೊಗ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಮತ್ತು ಬಿ ಎಸ್ ಯಡಿಯೂರಪ್ಪ (BS Yediyurappa) ಜೊತೆಯಾಗಿ ಹೆಲಿಕಾಪ್ಟರೊಂದರಲ್ಲಿ ಶಿವಮೊಗ್ಗ ನಗರಕ್ಕೆ ಆಗಮಿಸಿದರು. ಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ (ವಿ ಐ ಎಸ್ ಎಲ್) (VISL) ಕಾರ್ಖಾನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಯಡಿಯೂರಪ್ಪ ಮತ್ತು ಇತರ ನಾಯಕರೊಂದಿಗೆ ಶಿವಮೊಗ್ಗದ ಪ್ರವಾಸಿ ಮಂದಿರದಲ್ಲಿ ಮಹತ್ವದ ಸಭೆಯೊಂದನ್ನು ನಡೆಸಲಿದ್ದಾರೆ. ಸಭೆಯ ಬಳಿಕ ಮುಖ್ಯಮಂತ್ರಿಗಳು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ ಎಂದು ಮೂಲಗಳಿಂದ ಗೊತ್ತಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ