ವಿಐಎಸ್ ಎಲ್ ಕಾರ್ಖಾನೆಗೆ ಸಂಬಂಧಿಸಿದ ಸಭೆಗೆ ಸಿಎಂ ಬೊಮ್ಮಾಯಿ ಮತ್ತು ಬಿಎಸ್ ಯಡಿಯೂರಪ್ಪ ಹೆಲಿಕಾಪ್ಟರ್ ನಲ್ಲಿ ಶಿವಮೊಗ್ಗಗೆ ಆಗಮಿಸಿದರು
ಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ (ವಿ ಐ ಎಸ್ ಎಲ್) ಕಾರ್ಖಾನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಯಡಿಯೂರಪ್ಪ ಮತ್ತು ಇತರ ನಾಯಕರೊಂದಿಗೆ ಮಹತ್ವದ ಸಭೆಯೊಂದನ್ನು ನಡೆಸಲಿದ್ದಾರೆ.
ಶಿವಮೊಗ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಮತ್ತು ಬಿ ಎಸ್ ಯಡಿಯೂರಪ್ಪ (BS Yediyurappa) ಜೊತೆಯಾಗಿ ಹೆಲಿಕಾಪ್ಟರೊಂದರಲ್ಲಿ ಶಿವಮೊಗ್ಗ ನಗರಕ್ಕೆ ಆಗಮಿಸಿದರು. ಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ (ವಿ ಐ ಎಸ್ ಎಲ್) (VISL) ಕಾರ್ಖಾನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಯಡಿಯೂರಪ್ಪ ಮತ್ತು ಇತರ ನಾಯಕರೊಂದಿಗೆ ಶಿವಮೊಗ್ಗದ ಪ್ರವಾಸಿ ಮಂದಿರದಲ್ಲಿ ಮಹತ್ವದ ಸಭೆಯೊಂದನ್ನು ನಡೆಸಲಿದ್ದಾರೆ. ಸಭೆಯ ಬಳಿಕ ಮುಖ್ಯಮಂತ್ರಿಗಳು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ ಎಂದು ಮೂಲಗಳಿಂದ ಗೊತ್ತಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Feb 08, 2023 04:21 PM