Bengaluru: ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಪಿಸಮಾತುಗಳಲ್ಲಿ ಚರ್ಚಿಸಿದ್ದು ಏನು ಗೊತ್ತಾ?

|

Updated on: Mar 23, 2023 | 2:13 PM

ಮೂಲಗಳ ಪ್ರಕಾರ ರಿಜ್ವಾನ್ ಅರ್ಷದ್ ಮುಖ್ಯಮಂತ್ರಿ ಬೊಮ್ಮಾಯಿ ಜೊತೆ ಪಿಸುಮಾತಿನಲ್ಲಿ ಶಿವಾಜಿನಗರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸುತ್ತಿದ್ದಾರೆ.

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಮತ್ತು ಶಿವಾಜಿನಗರದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ (Rizwan Arshad) ಸರ್ಕಾರದ ಕಾರ್ಯಕ್ರಮವೊಂದರಲ್ಲಿ (government programme) ಗುಸು ಗುಸು ಮಾತಾಡಿದ ವಿಡಿಯೋ ವೈರಲ್ ಆಗುತ್ತಿದೆ ಮಾರಾಯ್ರೇ. ಆದರೆ, ಇದಕ್ಕೆ ಬಣ್ಣಹಚ್ಚಿ ಕತೆ ಕಟ್ಟುವ ಅವಶ್ಯಕತೆಯಿಲ್ಲ. ಅಸಲು ವಿಷಯವೇನೆಂದರೆ, ರಿಜ್ವಾನ್ ತಮ್ಮ ಕ್ಷೇತ್ರದಲ್ಲಿ ಕೆಲಸಗಾರನೆಂದು ಗುರುತಿಸಿಕೊಂಡಿದ್ದಾರೆ. ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ಪ್ರಾಮಾಣಿಕತೆಯಿಂದ ಮಾಡುತ್ತಿದ್ದಾರೆ ಅವರ ಪಕ್ಷದವರೇ ಹೇಳುತ್ತಾರೆ. ಮೂಲಗಳ ಪ್ರಕಾರ ಅವರು ಮುಖ್ಯಮಂತ್ರಿಗಳ ಜೊತೆ ಪಿಸುಮಾತಿನಲ್ಲಿ ಶಿವಾಜಿನಗರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ