Amit Shah in Karnataka: ಗೃಹ ಸಚಿವರನ್ನು ಭೇಟಿಯಾಗಲು ಆಗಮಿಸಿದ ಮುಖ್ಯಮಂತ್ರಿ ಬೊಮ್ಮಾಯಿ, ಯಡಿಯೂರಪ್ಪ ಹಾಗೂ ಗಣ್ಯರು

|

Updated on: Jan 28, 2023 | 10:54 AM

ಈಗಾಗಲೇ ಹುಬ್ಬಳ್ಳಿಗೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲು ಮುಖ್ಯಮಂತ್ರಿ ಬಸವರಾಗ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೋಟೆಲ್​ಗೆ ಆಗಮಿಸಿದರು.

ಹುಬ್ಬಳ್ಳಿ: ಚುನಾವಣಾ ಹೋರಾಟಗಳಿಗೆ ರೂಪುರೇಷಗಳನ್ನು ರೂಪಿಸುವಲ್ಲಿ ಸಿದ್ಧಹಸ್ತರಾಗಿರುವುದಕ್ಕೆ ಚಾಣಕ್ಯ ಎಂದು ಕರೆಸಿಕೊಳ್ಳುವ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ರಾಜ್ಯಪ್ರವಾಸದ ಭಾಗವಾಗಿ ಹುಬ್ಬಳ್ಳಿಗೆ ಆಗಮಿಸಿ ನಗರದ ಒಂದು ಖಾಸಗಿ ಹೋಟೆಲ್ ನಲ್ಲಿ ತಂಗಿದ್ದಾರೆ. ಅವರೊಂದಿಗೆ ಬೆಳಗಿನ ಉಪಹಾರ ಸೇವಿಸಲು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ (BS Yediyurappa), ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಮತ್ತು ಉತರ ಗಣ್ಯರು ಈಗ್ಗೆ ಸ್ವಲ್ಪ ಹೊತ್ತು ಮುಂಚೆ ಗೃಹ ಸಚಿವರು ತಂಗಿರುವ ಹೋಟೆಲ್ ಗೆ ಆಗಮಿಸುವುದನ್ನು ನೀವು ವಿಡಿಯೋದಲ್ಲಿ ನೋಡಬಹುದು. ಅಂದಹಾಗೆ ಬರ್ತ್ ಡೇ ಬಾಯ್ ಬೊಮ್ಮಾಯಿ ಅವರು ಅಮಿತ್ ಶಾ ಸಮ್ಮುಖದಲ್ಲಿ ಕೇಕ್ ಕಟ್ ಮಾಡಲಿದ್ದಾರೆ ಅಂತ ಮೂಲಗಳಿಂದ ಗೊತ್ತಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ