ವಿಧಾನಸೌಧ ಆವರಣದಲ್ಲಿ ಅಂಬೇಡ್ಕರ್ ಜಯಂತಿ; ಜಯ್ ಭೀಮ್ ಎಂದು ಕೂಗಿ ನಮನ ಸಲ್ಲಿಸಿದ ಸಿಎಂ ಬೊಮ್ಮಾಯಿ
ವಿಧಾನಸೌಧದ ಆವರಣದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಪುಷ್ಪಾರ್ಚನೆ ಸಲ್ಲಿಸಿದ್ದು ಬಳಿಕ ಜಯ್ ಭೀಮ್ ಎಂದು ಘೋಷಣೆ ಕೂಗುವ ಮೂಲಕ ಅಂಬೇಡ್ಕರ್ಗೆ ನಮನ ಸಲ್ಲಿಸಿದ್ದಾರೆ.
ಬೆಂಗಳೂರು: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ. ದೇಶಾದ್ಯಂತ ಅಂಬೇಡ್ಕರ್ ಜಯಂತಿ ಆಚರಿಸಲಾಗ್ತಿದೆ. ವಿಧಾನಸೌಧದ ಆವರಣದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಪುಷ್ಪಾರ್ಚನೆ ಸಲ್ಲಿಸಿದ್ದು ಬಳಿಕ ಜಯ್ ಭೀಮ್ ಎಂದು ಘೋಷಣೆ ಕೂಗುವ ಮೂಲಕ ಅಂಬೇಡ್ಕರ್ಗೆ ನಮನ ಸಲ್ಲಿಸಿದ್ದಾರೆ.
ಭಾರತದ ಸಂವಿಧಾನ ಶಿಲ್ಪಿ, ಭಾರತ ಕಂಡ ಶ್ರೇಷ್ಠ ನಾಯಕ ಡಾ.ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನವನ್ನು ಏಪ್ರಿಲ್ 14 ರಂದು ಆಚರಿಸಲಾಗುತ್ತದೆ. ಡಾ. ಭೀಮರಾವ್ ಅಂಬೇಡ್ಕರ್ ಅವರು ಮಧ್ಯಪ್ರದೇಶದ ಮೋವ್‌ನಲ್ಲಿ 1891 ರ ಏಪ್ರಿಲ್ 14 ರಂದು ಜನಿಸಿದರು. ಅವರು 1908ರಲ್ಲಿ ಎಲ್ಫಿನ್ ಸ್ಟೋನ್ ಹೈಸ್ಕೂಲ್‌ನಿಂದ ಮೆಟ್ರಿಕ್ಯೂಲೇಶನ್ ಪಾಸ್ ಮಾಡಿ ಉನ್ನತ ಶಿಕ್ಷಣವನ್ನು ನ್ಯೂಯಾರ್ಕ್ ಕೊಲಂಬಿಯಾ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದರು. 1927 ರ ಜೂನ್ 8 ರಂದು ಕೊಲಂಬಿಯಾ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದರು. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಜನ್ಮದಿನವಾಗಿ ಇಂದು ಅಂಬೇಡ್ಕರ್ ಜಯಂತಿ ಆಚರಿಸಲಾಗುತ್ತಿದೆ.