ವಿಧಾನಸೌಧ ಆವರಣದಲ್ಲಿ ಅಂಬೇಡ್ಕರ್ ಜಯಂತಿ; ಜಯ್ ಭೀಮ್ ಎಂದು ಕೂಗಿ ನಮನ ಸಲ್ಲಿಸಿದ ಸಿಎಂ ಬೊಮ್ಮಾಯಿ

|

Updated on: Apr 14, 2023 | 12:02 PM

ವಿಧಾನಸೌಧದ ಆವರಣದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಪುಷ್ಪಾರ್ಚನೆ ಸಲ್ಲಿಸಿದ್ದು ಬಳಿಕ ಜಯ್ ಭೀಮ್ ಎಂದು ಘೋಷಣೆ ಕೂಗುವ ಮೂಲಕ ಅಂಬೇಡ್ಕರ್​ಗೆ ನಮನ ಸಲ್ಲಿಸಿದ್ದಾರೆ.

ಬೆಂಗಳೂರು: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ. ದೇಶಾದ್ಯಂತ ಅಂಬೇಡ್ಕರ್ ಜಯಂತಿ ಆಚರಿಸಲಾಗ್ತಿದೆ. ವಿಧಾನಸೌಧದ ಆವರಣದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಪುಷ್ಪಾರ್ಚನೆ ಸಲ್ಲಿಸಿದ್ದು ಬಳಿಕ ಜಯ್ ಭೀಮ್ ಎಂದು ಘೋಷಣೆ ಕೂಗುವ ಮೂಲಕ ಅಂಬೇಡ್ಕರ್​ಗೆ ನಮನ ಸಲ್ಲಿಸಿದ್ದಾರೆ.

ಭಾರತದ ಸಂವಿಧಾನ ಶಿಲ್ಪಿ, ಭಾರತ ಕಂಡ ಶ್ರೇಷ್ಠ ನಾಯಕ ಡಾ.ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನವನ್ನು ಏಪ್ರಿಲ್ 14 ರಂದು ಆಚರಿಸಲಾಗುತ್ತದೆ. ಡಾ. ಭೀಮರಾವ್ ಅಂಬೇಡ್ಕರ್ ಅವರು ಮಧ್ಯಪ್ರದೇಶದ ಮೋವ್‌ನಲ್ಲಿ 1891 ರ ಏಪ್ರಿಲ್ 14 ರಂದು ಜನಿಸಿದರು. ಅವರು 1908ರಲ್ಲಿ ಎಲ್ಫಿನ್ ಸ್ಟೋನ್ ಹೈಸ್ಕೂಲ್‌ನಿಂದ ಮೆಟ್ರಿಕ್ಯೂಲೇಶನ್ ಪಾಸ್ ಮಾಡಿ ಉನ್ನತ ಶಿಕ್ಷಣವನ್ನು ನ್ಯೂಯಾರ್ಕ್ ಕೊಲಂಬಿಯಾ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದರು. 1927 ರ ಜೂನ್‌ 8 ರಂದು ಕೊಲಂಬಿಯಾ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದರು. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಜನ್ಮದಿನವಾಗಿ ಇಂದು ಅಂಬೇಡ್ಕರ್ ಜಯಂತಿ ಆಚರಿಸಲಾಗುತ್ತಿದೆ.

Published on: Apr 14, 2023 12:02 PM