Karnataka Budget 2023: ಅಂಗನವಾಡಿ, ಆಶಾ ಕಾರ್ಯಕರ್ತೆಯರ ಮಾಸಿಕ ಗೌರವ ಧನ ಹೆಚ್ಚಿಸಿದ ಮುಖ್ಯಮಂತ್ರಿ ಬಸವಾರಾಜ ಬೊಮ್ಮಾಯಿ

|

Updated on: Feb 17, 2023 | 1:54 PM

ಪ್ರಾಯಶಃ ಈ ಹಿನ್ನೆಲೆಯಲ್ಲೇ ಅವರು ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕರು ಹಾಗೂ ಆಶಾ ಕಾರ್ಯಕರ್ತೆಯರ ಮಾಸಿಕ ಗೌರವ ಧನದಲ್ಲಿ ರೂ. 1,000 ಹೆಚ್ಚಳವನ್ನು ಘೋಷಿಸಿದ್ದಾರೆ.

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು 2023-24 ಸಾಲಿನ ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಎಲ್ಲ ಸಮುದಾಯಗಳಿಗೆ, ನೌಕರ ವರ್ಗಕ್ಕೆ (working class) ಸಂತೋಷಪಡಿಸುವ ಬಜೆಟ್ ಮಂಡಿಸಲು ಅವರು ಪ್ರಯತ್ನಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು (Anganwadi workers), ಅಂಗನವಾಡಿ ಸಹಾಯಕರು ಹಾಗೂ ಆಶಾ ಕಾರ್ಯಕರ್ತೆಯರು ಬಹಳ ದಿನಗಳಿಂದ ತಮಗೆ ನೀಡುತ್ತಿರುವ ಗೌರವಧನ ಹೆಚ್ಚಸುವುದರ ಜೊತೆಗೆ ಹಲವಾರು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ನಿರಶನ ನಡೆಸುವ ಸಂಗತಿ ನಮಗೆ ಗೊತ್ತಿದೆ. ಪ್ರಾಯಶಃ ಈ ಹಿನ್ನೆಲೆಯಲ್ಲೇ ಅವರು ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕರು ಹಾಗೂ ಆಶಾ ಕಾರ್ಯಕರ್ತೆಯರ ಮಾಸಿಕ ಗೌರವ ಧನದಲ್ಲಿ ರೂ. 1,000 ಹೆಚ್ಚಳವನ್ನು ಘೋಷಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 17, 2023 01:53 PM