ಸತ್ಯ ಹರಿಶ್ಚಂದ್ರ ಬಳಗದವರೊಂದಿಗೆ ತಮ್ಮ ಅಧಿಕೃತ ನಿವಾಸದಲ್ಲಿ ಉಪಹಾರ ಸೇವಿಸಿದ ಮುಖಮಂತ್ರಿ ಬಸವರಾಜ ಬೊಮ್ಮಾಯಿ

ಸತ್ಯ ಹರಿಶ್ಚಂದ್ರ ಬಳಗದವರೊಂದಿಗೆ ತಮ್ಮ ಅಧಿಕೃತ ನಿವಾಸದಲ್ಲಿ ಉಪಹಾರ ಸೇವಿಸಿದ ಮುಖಮಂತ್ರಿ ಬಸವರಾಜ ಬೊಮ್ಮಾಯಿ

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on:Jan 11, 2023 | 12:03 PM

ಸ್ಮಶಾನ ಕಾರ್ಮಿಕರನ್ನು ಇನ್ನು ಮುಂದೆ ಸತ್ಯ ಹರಿಶ್ಚಂದ್ರ ಬಳಗದವರು ಅಂತ ಉಲ್ಲೇಖಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದ್ದಾರಂತೆ.

ಬೆಂಗಳೂರು:  ಸ್ಮಶಾನಗಳಲ್ಲಿ ಕೆಲಸ ಮಾಡುವವರ (cemetery workers) ಬಗ್ಗೆ ನಮ್ಮ ಸಮಾಜದಲ್ಲಿ ಒಂದು ಬಗೆಯ ಅಸಡ್ಡೆ ಭಾವನೆಯಿದೆ. ಆ ಭಾವನೆಯನ್ನು ಹೋಗಾಲಾಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಬೆಂಗಳೂರಲ್ಲಿರುವ ಎಲ್ಲ ಸ್ಮಶಾನ ಕಾರ್ಮಿಕರಿಗೆ (gravediggers) ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ತಮ್ಮ ಅಧಿಕೃತ ನಿವಾಸಕ್ಕೆ ಕರೆಸಿ ಅವರೊಂದಿಗೆ ಬೆಳಗಿನ ಉಪಹಾರ ಸೇವಿಸಿದರು. ಸ್ಮಶಾನ ಕಾರ್ಮಿಕರನ್ನು ಇನ್ನು ಮುಂದೆ ಸತ್ಯ ಹರಿಶ್ಚಂದ್ರ ಬಳಗದವರು ಅಂತ ಉಲ್ಲೇಖಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದ್ದಾರಂತೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

 

Published on: Jan 11, 2023 12:01 PM