Karnataka Assembly Polls: ಮುಖ್ಯಮಂತ್ರಿ ಬೊಮ್ಮಾಯಿ ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ತೆರಳಿದ್ದಾಗ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಸಿಕ್ಕರು!

ಅರುಣ್​ ಕುಮಾರ್​ ಬೆಳ್ಳಿ

Updated on: Apr 13, 2023 | 12:27 PM

ಸುದೀಪ್ ತಾನು ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಮಾಮ ಅಂತ ಕರೆಯುವುದನ್ನು ಹೇಳಿಕೊಂಡರಲ್ಲದೆ ಅವರು ಹೇಳುವ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವುದಾಗಿ ಹೇಳಿದ್ದರು.

ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಸಿನಿಮಾದವರ ನಂಟು ಜೋರಾಗಿದೆ ಮಾರಾಯ್ರೇ. ಕಳೆದ ವಾರವಷ್ಟೇ ಜನಪ್ರಿಯ ನಾಯಕ ನಟ ಕಿಚ್ಚ ಸುದೀಪ್ (Kiccha Sudeep) ಒಂದಿಗೆ ಅವರು ಸುದ್ದಿಗೋಷ್ಟಿಯೊಂದರಲ್ಲಿ ಪಾಲ್ಗೊಂಡರು. ಆ ಸುದ್ದಿಗೋಷ್ಟಿಯಲ್ಲಿ ಸುದೀಪ್ ತಾನು ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಮಾಮ ಅಂತ ಕರೆಯುವುದನ್ನು ಹೇಳಿಕೊಂಡರಲ್ಲದೆ ಅವರು ಹೇಳುವ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವುದಾಗಿ ಹೇಳಿದ್ದರು. ಇಂದು ಬೊಮ್ಮಾಯಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ (Kollur Mookambika temple) ಭೇಟಿ ನೀಡಿದಾಗ ಕಾಂತಾರ ಚಿತ್ರದ ಮೂಲಕ ಅಂತರರಾಷ್ಟ್ರೀಯ ಮನ್ನಣೆ ಗಳಿಸಿರುವ ರಿಷಬ್ ಶೆಟ್ಟಿ (Rishab Shetty) ಸಿಕ್ಕರು. ರಿಷಬ್ ಮುಖ್ಯಮಂತ್ರಿಗಳನ್ನು ಕಂಡಕೂಡಲೇ ಪಾದಮುಟ್ಟಿ ನಮಸ್ಕರಿಸಿದ್ದು ವಿಶೇಷವೆನಿಸಿತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.