Mandya district in charge minister: ಮಂಡ್ಯದ ಜನ ಬಯಸಿದ್ದು ಹಾಲು-ಅನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದೂ ಹಾಲು-ಅನ್ನ
ಅಶೋಕ ಬೇರೆ ಜವಾಬ್ದಾರಿಗಳನ್ನು ನಿಭಾಯಿಸುತ್ತಿರುವುದರಿಂದ ಮಂಡ್ಯ ಜಿಲ್ಲೆಗೆ ಹೆಚ್ಚಿನ ಗಮನ ನೀಡಲಾಗುತ್ತಿಲ್ಲ ಅಂತ ತಮಗೆ ಪತ್ರ ಬರೆದಿರುವುದರಿಂದ ಆ ಜವಾಬ್ದಾರಿಯಿಂದ ಮುಕ್ತ ಮಾಡಲಾಗಿದೆ ಎಂದು ಹೇಳಿದರು.
ಬೆಂಗಳೂರು: ಮಂಡ್ಯ ಜಿಲ್ಲೆಯ (Mandya district) ಬಿಜೆಪಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ಜಿಲ್ಲೆಯ ಉಸ್ತುವಾರಿ ಸಚಿವ ಆರ್ ಅಶೋಕ (R Ashoka) ಅವರ ಕಾರ್ಯವೈಖರಿಯಿಂದ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ಮತ್ತು ಬೇಸತ್ತ ವಿಷಯವನ್ನು ನಾವು ಈಗಾಗಲೇ ವರದಿ ಮಾಡಿದ್ದೇವೆ. ಹಾಗಾಗಿ, ಅವರನ್ನು ಆ ಜವಾಬ್ದಾರಿಯಿಂದ ಮುಕ್ತ ಮಾಡಿರುವುದು ಆಶ್ಚರ್ಯವನ್ನೇನೂ ಹುಟ್ಟಿಸದು. ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು, ತಮ್ಮ ಸಹೋದ್ಯೋಗಿಯ ಇಮೇಜಿಗೆ ಧಕ್ಕೆಯಾಗದ ಹಾಗೆ ಹೇಳಿಕೆಯೊಂದನ್ನು ನೀಡಿ ಅಶೋಕ ಬೇರೆ ಜವಾಬ್ದಾರಿಗಳನ್ನು ನಿಭಾಯಿಸುತ್ತಿರುವುದರಿಂದ ಮಂಡ್ಯ ಜಿಲ್ಲೆಗೆ ಹೆಚ್ಚಿನ ಗಮನ ನೀಡಲಾಗುತ್ತಿಲ್ಲ ಅಂತ ತಮಗೆ ಪತ್ರ ಬರೆದಿರುವುದರಿಂದ ಆ ಜವಾಬ್ದಾರಿಯಿಂದ ಮುಕ್ತ ಮಾಡಲಾಗಿದೆ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Feb 10, 2023 04:24 PM
Latest Videos