Karnataka Ratna Award: ವಿಷ್ಣುವರ್ಧನ್​ಗೆ ‘ಕರ್ನಾಟಕ ರತ್ನ’ ನೀಡಬೇಕು ಎಂಬ ಬೇಡಿಕೆ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

|

Updated on: Jan 29, 2023 | 3:56 PM

CM Basavaraj Bommai | Vishnuvardhan: ಮೇರು ನಟ ವಿಷ್ಣುವರ್ಧನ್​ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕು ಎಂಬುದು ಅಭಿಮಾನಿಗಳ ಬಯಕೆ. ಅದರ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದ್ದಾರೆ.

ಮೈಸೂರಿನಲ್ಲಿ ವಿಷ್ಣುವರ್ಧನ್​ (Vishnuvardhan) ಅವರ ಸ್ಮಾರಕವನ್ನು ಸಿಎಂ ಬೊಮ್ಮಾಯಿ ಉದ್ಘಾಟನೆ ಮಾಡಿದ್ದಾರೆ. ಇದು ವಿಷ್ಣು ಅಭಿಮಾನಿಗಳ ಪಾಲಿಗೆ ವಿಶೇಷ ದಿನ. ‘ಸಾಹಸ ಸಿಂಹ’ ವಿಷ್ಣುವರ್ಧನ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ (Karnataka Ratna Award) ಸಿಗಬೇಕು ಎಂಬುದು ಫ್ಯಾನ್ಸ್​ ಬಯಕೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸ್ಮಾರಕ ಅನಾವರಣ ಮಾಡಿದ ಬಳಿಕ ಮಾತನಾಡಿದ ಅವರು, ‘ವಿಷ್ಣು ಅಭಿಮಾನಿಗಳ ಮನದಾಳದ ಮಾತು ಮತ್ತು ಭಾವನೆಗಳಿಗೆ ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತ್ತದೆ’ ಎಂದು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:56 pm, Sun, 29 January 23

Follow us on