‘ಗಂಧದ ಗುಡಿ’ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ

‘ಗಂಧದ ಗುಡಿ’ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ

TV9 Web
| Updated By: ಮದನ್​ ಕುಮಾರ್​

Updated on:Oct 21, 2022 | 10:02 PM

Gandhada Gudi | Tax Free: ‘ಗಂಧದ ಗುಡಿ’ ಅ.28ರಂದು ರಿಲೀಸ್​ ಆಗಲಿದೆ. ಪುನೀತ್​ ರಾಜ್​ಕುಮಾರ್​ ಅವರ ಈ ಕನಸಿನ ಸಾಕ್ಷ್ಯಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

ಪರಿಸರ ಕಾಳಜಿ ಇರುವ ‘ಗಂಧದ ಗುಡಿ’ (Gandhada Gudi) ಸಾಕ್ಷ್ಯಚಿತ್ರಕ್ಕೆ ತೆರಿಗೆ ವಿನಾಯಿತಿ (Tax Free) ನೀಡಬೇಕು ಎಂದು ಪುನೀತ್​ ರಾಜ್​ಕುಮಾರ್​ ಅಭಿಮಾನಿಗಳು ಅಭಿಯಾನ ಶುರು ಮಾಡಿದ್ದರು. ಅದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ಪ್ರತಿಕ್ರಿಯೆ ನೀಡಿದ್ದಾರೆ. ಇದು ಯುವ ಜನತೆಗೆ ಮಾದರಿ ಆಗುವಂತಹ ಸಾಕ್ಷ್ಯಚಿತ್ರ ಆದ್ದರಿಂದ ಅದಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ. ಇದು ಪುನೀತ್​ ರಾಜ್​ಕುಮಾರ್​ ಅವರ ಕನಸಿನ ಪ್ರಾಜೆಕ್ಟ್​. ಅ.28ರಂದು ‘ಗಂಧದ ಗುಡಿ’ ರಿಲೀಸ್​ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published on: Oct 21, 2022 10:02 PM