Vijayapura: ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಅಂತಿಮಯಾತ್ರೆಯಲ್ಲಿ ಪಾಲ್ಗೊಳ್ಳಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡುತ್ತಿದ್ದಾರೆ, ಭಕ್ತರಿಗೆ ಊಟ-ತಿಂಡಿಯ ವ್ಯವಸ್ಥೆಯನ್ನು ಸಹ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ಬೆಂಗಳೂರು: ಶನಿವಾರವಷ್ಟೇ ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ (Sri Siddeshwara Swamiji) ಅವರನ್ನು ಕಂಡು ಮಾತಾಡಿಸಿ ಸೋಮವಾರ ಬೆಳಗ್ಗೆ ಶ್ರೀಗಳ ಆರೋಗ್ಯ ಸ್ಥಿತಿಯ ಬಗ್ಗೆ ಮಾಧ್ಯಮಗಳಿಗೆ ವಿವರಣೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿರುವುದಾಗಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಬೊಮ್ಮಾಯಿ ಅವರು ಶ್ರೀಗಳ ಅಂತಿಮ ದರ್ಶನಕ್ಕೆ ಲಕ್ಷಗಟ್ಟಲೆ ಭಕ್ತರು ಆಶ್ರಮಕ್ಕೆ ಬರುತ್ತಿದ್ದು, ಎಮ್ ಬಿ ಪಾಟೀಲ, ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಸೇರಿದಂತೆ ಹಲವಾರು ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡುತ್ತಿದ್ದಾರೆ, ಭಕ್ತರಿಗೆ ಊಟ-ತಿಂಡಿಯ ವ್ಯವಸ್ಥೆಯನ್ನು ಸಹ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

