ಸ್ಮಶಾನಕ್ಕಾಗಿ ಶೀಘ್ರದಲ್ಲಿ ಜಮೀನು ನೀಡಲಾಗುತ್ತದೆ; ಸಿಎಂ ಬಸವರಾಜ ಬೊಮ್ಮಾಯಿ
ಜಿಲ್ಲಾಧಿಕಾರಿಗಳು ಆಡಳಿತ ಯಂತ್ರದ ಬಹುಮಖ್ಯ ಕೊಂಡಿಯಾಗಿರುತ್ತಾರೆ. ಸರ್ಕಾರ ಮತ್ತು ಜನರ ನಡುವೆ ಸೇತುವೆಯಾಗಿರುತ್ತಾರೆ. ಅಧಿಕಾರ ಮತ್ತು ಜವಾಬ್ದಾರಿ ಅರಿತು ಕೆಲಸ ಮಾಡಬೇಕು ಎಂದು ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು.
ನಿನ್ನೆ (ಡಿ.31) ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರ್ನಾಟಕದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳು ಆಡಳಿತ ಯಂತ್ರದ ಬಹುಮಖ್ಯ ಕೊಂಡಿಯಾಗಿರುತ್ತಾರೆ. ಸರ್ಕಾರ ಮತ್ತು ಜನರ ನಡುವೆ ಸೇತುವೆಯಾಗಿರುತ್ತಾರೆ. ಅಧಿಕಾರ ಮತ್ತು ಜವಾಬ್ದಾರಿ ಅರಿತು ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು. ಇದೇ ವೇಳೆ ಕಡತ ವಿಲೇವಾರಿ ಜವಾಬ್ದಾರಿಯನ್ನು ಉಪವಿಭಾಗಾಧಿಕಾರಿಗಳಿಗೆ ನೀಡಲಾಗಿದೆ. ಗ್ರಾಮಾಂತರ ಪ್ರದೇಶದಲ್ಲಿ ದಾಖಲೆ ನೀಡಲು ಸ್ವಾಮಿತ್ವ ಯೋಜನೆಯನ್ನು ಕೇಂದ್ರದ ಅನುದಾನದೊಂದಿಗೆ ಜಾರಿ ಮಾಡಲಾಗಿದೆ. ನಗರ ಪ್ರದೇಶ, ಗ್ರಾಮಾಂತರ ಪ್ರದೇಶಗಳಲ್ಲಿ ಸರ್ಕಾರವೇ ಭೂಮಿ ಖರೀದಿಸಿ ಸ್ಮಶಾನಕ್ಕೆ ಜಾಗ ನೀಡಲಿದೆ. ರಾಜ್ಯದಲ್ಲಿ ಪ್ರಸ್ತುತ 4,370 ಗ್ರಾಮಗಳಲ್ಲಿ ಸ್ಮಶಾನ ಭೂಮಿಗೆ ಮನವಿ ಬಂದಿದೆ ಎಂದು ತಿಳಿಸಿದರು.
ಇದನ್ನೂ ಓದಿ
ಅತ್ಯದ್ಭುತ ಉದ್ಯಾನವನದಿಂದ ಕೂಡಿದೆ ಅಮೀನಗಡ ಪೊಲೀಸ್ ಠಾಣೆ; ಪರಿಸರ ಕಾಳಜಿಗೆ ಜನರಿಂದ ಮೆಚ್ಚುಗೆ

