[lazy-load-videos-and-sticky-control id=”https://youtu.be/D7JyHb1y9eM”]
ಬೆಂಗಳೂರು:ನಗರದಲ್ಲಿ ದಿನೇ ದಿನೇ ಕೊರೊನಾ ಪಾಸಿಟಿವ್ ಪ್ರಕರಣಗಳು ವಿಪರೀತ ಹೆಚ್ಚಾಗುತ್ತಿರುವುದು ಆಡಳಿತ ವರ್ಗಕ್ಕೆ ದೊಡ್ಡ ತಲೆನೋವಾಗಿದೆ. ಕೊರೊನಾ ಸೋಂಕಿತರನ್ನು ಆಸ್ಪತ್ರೆಗೆ ಸಾಗಿಸಲು ಆಂಬುಲೆನ್ಸ್ ವಾಹನಗಳ ಕೊರತೆ ಉಂಟಾಗಿರುವುದು ನುಂಗಾಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ.
ಆದ ಕಾರಣ ಸಿಎಂ ಬಿ.ಎಸ್. ಯಡಿಯೂರಪ್ಪ ನಗರದಲ್ಲಿ ಅಂಬುಲೆನ್ಸ್ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಮತ್ತಷ್ಟು ಅಂಬುಲೆನ್ಸ್ ಖರೀದಿಗೆ ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಪ್ರತಿ 50 ಬೆಡ್ ಇರುವ ಆಸ್ಪತ್ರೆಗೆ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಿಸುವುದರ ಜೊತೆಗೆ ನಿಮ್ಮ ನಿಮ್ಮ ವಲಯಗಳಲ್ಲಿ ಆಗುವ ಅನಾಹುತಗಳಿಗೆ ನೀವೇ ಜವಾಬ್ದಾರಿ ಎಂಬ ಖಡಕ್ ವಾರ್ನಿಂಗನ್ನು ನೋಡಲ್ ಅಧಿಕಾರಿಗಳಿಗೆ ನೀಡಿದ್ದಾರೆ. ಹಾಗೆಯೇ ನಿಮ್ಮ ನಿಮ್ಮ ವಲಯದಲ್ಲಿನ ಸೋಂಕಿತರರಿಗೆ ನಿಮ್ಮ ವಲಯದಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂಬ ಸೂಚನೆಯನ್ನು ಸಹ ನೀಡಿದ್ದಾರೆ.
Published On - 1:25 pm, Fri, 17 July 20