[lazy-load-videos-and-sticky-control id=”schF3_vCTTg”] ಬೆಂಗಳೂರು: ಸಿಎಂ ಯಡಿಯೂರಪ್ಪಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಕುಟುಂಬಸ್ಥರು ಕೊರೊನಾ ಟೆಸ್ಟ್ ಮಾಡಿಸಿದ್ದರು. ಅವರ ಟೆಸ್ಟ್ ವರದಿ ಕೈ ಸೇರಿದ್ದು, ಯಡಿಯೂರಪ್ಪ ಪುತ್ರಿಗೂ ಕೊರೊನಾ ಪಾಸಿಟಿವ್ ಬಂದಿದೆ. ಹಾಗೂ ಯಡಿಯೂರಪ್ಪರ ಮಗ ವಿಜಯೇಂದ್ರ ಅವರ ವರದಿಯಲ್ಲಿ ಕೊರೊನಾ ನೆಗೆಟಿವ್ ಬಂದಿದೆ. ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಸಿಎಂ ಪುತ್ರಿ ಪದ್ಮಾವತಿ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸಿಎಂ ಪುತ್ರಿಗೆ ಸೋಂಕಿನ ಯಾವುದೇ ಗುಣಲಕ್ಷಣಗಳಿಲ್ಲ. ಹೀಗಾಗಿ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಹಾಗೂ ಸಿಎಂ ಯಡಿಯೂರಪ್ಪನವರಿಗೂ […]
ಬೆಂಗಳೂರು: ಸಿಎಂ ಯಡಿಯೂರಪ್ಪಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಕುಟುಂಬಸ್ಥರು ಕೊರೊನಾ ಟೆಸ್ಟ್ ಮಾಡಿಸಿದ್ದರು. ಅವರ ಟೆಸ್ಟ್ ವರದಿ ಕೈ ಸೇರಿದ್ದು, ಯಡಿಯೂರಪ್ಪ ಪುತ್ರಿಗೂ ಕೊರೊನಾ ಪಾಸಿಟಿವ್ ಬಂದಿದೆ. ಹಾಗೂ ಯಡಿಯೂರಪ್ಪರ ಮಗ ವಿಜಯೇಂದ್ರ ಅವರ ವರದಿಯಲ್ಲಿ ಕೊರೊನಾ ನೆಗೆಟಿವ್ ಬಂದಿದೆ.
ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಸಿಎಂ ಪುತ್ರಿ ಪದ್ಮಾವತಿ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸಿಎಂ ಪುತ್ರಿಗೆ ಸೋಂಕಿನ ಯಾವುದೇ ಗುಣಲಕ್ಷಣಗಳಿಲ್ಲ. ಹೀಗಾಗಿ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಹಾಗೂ ಸಿಎಂ ಯಡಿಯೂರಪ್ಪನವರಿಗೂ ಯಾವುದೇ ಗುಣಲಕ್ಷಣ ಕಂಡು ಬಂದಿರಲಿಲ್ಲ.