AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ರಿಪೋರ್ಟ್​ ನೆಗಟಿವ್​ ಆಸ್ಪತ್ರೆಯಿಂದ ಸಿಎಂ ಬಿ.ಎಸ್​.ಯಡಿಯೂರಪ್ಪ ಡಿಸ್ಚಾರ್ಜ್

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 22, 2021 | 5:46 PM

Share

ಕೊರೊನಾ ಸೋಂಕಿಗೆ ತುತ್ತಾಗಿದ್ದ ಸಿಎಂ ಯಡಿಯೂರಪ್ಪ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಿಂದ ಹೊರ ಬರ್ತಿದ್ದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ್ರು. ಕೊರೊನಾ ಸೋಂಕಿಗೆ ತುತ್ತಾಗಿದ್ದ ಬಿ.ಎಸ್​.ಯಡಿಯೂರಪ್ಪ ಮತ್ತು ಮೊಮ್ಮಗಳು ಸೌಂದರ್ಯ ಇಬ್ಬರೂ ಆಸ್ಪತ್ರೆಯಿಂದ ಡಿಸ್ಚಾರ್ಜ್​

ಕೊರೊನಾ ಸೋಂಕಿಗೆ ತುತ್ತಾಗಿದ್ದ ಸಿಎಂ ಯಡಿಯೂರಪ್ಪ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಿಂದ ಹೊರ ಬರ್ತಿದ್ದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ್ರು. ಕೊರೊನಾ ಸೋಂಕಿಗೆ ತುತ್ತಾಗಿದ್ದ ಬಿ.ಎಸ್​.ಯಡಿಯೂರಪ್ಪ ಮತ್ತು ಮೊಮ್ಮಗಳು ಸೌಂದರ್ಯ ಇಬ್ಬರೂ ಆಸ್ಪತ್ರೆಯಿಂದ ಡಿಸ್ಚಾರ್ಜ್​

ಕೊರೊನಾ ಸೋಂಕಿಗೆ ತುತ್ತಾಗಿದ್ದ ಹಿನ್ನೆಲೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿದ್ದಾರೆ. ಕೊರೊನಾದಿಂದ ಗುಣಮುಖರಾದ ಕಾರಣ ಯಡಿಯೂರಪ್ಪ ಅವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಜತೆಗೆ ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯ ಕೂಡಾ ಸೋಂಕಿನಿಂದ ಚೇತರಿಸಿಕೊಂಡಿದ್ದು ಅವರನ್ನೂ ಡಿಸ್​ಚಾರ್ಜ್​ ಮಾಡಲಾಗಿದೆ. ಡಿಸ್​ಚಾರ್ಜ್​ ಮಾಡಿದ ನಂತರ ಬಿ.ಎಸ್.ಯಡಿಯೂರಪ್ಪ, ಆಸ್ಪತ್ರೆಯಿಂದ ನೇರವಾಗಿ ತಮ್ಮ ಅಧಿಕೃತ ನಿವಾಸ ಕಾವೇರಿಗೆ ತೆರಳಿದ್ದಾರೆ.
(CM BS Yediyurappa discharged from Manipal hospital after he tests negative for Covid 19)

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು