5ನೇ ಬಾರಿಗೆ ಕಾವೇರಿ ಮಾತೆಗೆ ಬಾಗಿನ ಅರ್ಪಿಸಿದ ಭಾಗ್ಯ ನನ್ನದು CM ಯಡಿಯೂರಪ್ಪ

|

Updated on: Aug 21, 2020 | 4:25 PM

[lazy-load-videos-and-sticky-control id=”vSrerggGJEc”] ಮಂಡ್ಯ: ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ನಾಡಿನ ಜೀವನದಿ ಕಾವೇರಿ ಮೈದುಂಬಿ ಹರಿಯುತ್ತಿದ್ದಾಳೆ. ಹೀಗಾಗಿ KRS ಅಣೆಕಟ್ಟು ಭರ್ತಿಯಾಗಿದ್ದು, ಪ್ರತಿವರ್ಷದ ವಾಡಿಕೆಯಂತೆ KRS ಅಣೆಕಟ್ಟಿನಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಕಾವೇರಿ ಮಾತೆಗೆ ಬಾಗಿನ ಅರ್ಪಿಸಿದರು. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ KRS ಅಣೆಕಟ್ಟಿನ ಬಳಿ, ಗುರೂಜಿ ಭಾನುಪ್ರಕಾಶ್ ನೇತೃತ್ವದಲ್ಲಿ ನಡೆದ ಕಾವೇರಿ ಮಾತೆಗೆ ಬಾಗಿನ ಅರ್ಪಿಸುವ ಪೂಜೆಯಲ್ಲಿ ಸಿಎಂ ಭಾಗಿಯಾಗಿದ್ದಲ್ಲದೆ, ಕಾವೇರಿ ನದಿಗೆ ಬಾಗಿನ ಅರ್ಪಿಸಿದರು. 5 ನೇ ಬಾರಿಗೆ ಬಂದು ನಾನು […]

5ನೇ ಬಾರಿಗೆ ಕಾವೇರಿ ಮಾತೆಗೆ ಬಾಗಿನ ಅರ್ಪಿಸಿದ ಭಾಗ್ಯ ನನ್ನದು CM ಯಡಿಯೂರಪ್ಪ
Follow us on

[lazy-load-videos-and-sticky-control id=”vSrerggGJEc”]

ಮಂಡ್ಯ: ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ನಾಡಿನ ಜೀವನದಿ ಕಾವೇರಿ ಮೈದುಂಬಿ ಹರಿಯುತ್ತಿದ್ದಾಳೆ. ಹೀಗಾಗಿ KRS ಅಣೆಕಟ್ಟು ಭರ್ತಿಯಾಗಿದ್ದು, ಪ್ರತಿವರ್ಷದ ವಾಡಿಕೆಯಂತೆ KRS ಅಣೆಕಟ್ಟಿನಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಕಾವೇರಿ ಮಾತೆಗೆ ಬಾಗಿನ ಅರ್ಪಿಸಿದರು.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ KRS ಅಣೆಕಟ್ಟಿನ ಬಳಿ, ಗುರೂಜಿ ಭಾನುಪ್ರಕಾಶ್ ನೇತೃತ್ವದಲ್ಲಿ ನಡೆದ ಕಾವೇರಿ ಮಾತೆಗೆ ಬಾಗಿನ ಅರ್ಪಿಸುವ ಪೂಜೆಯಲ್ಲಿ ಸಿಎಂ ಭಾಗಿಯಾಗಿದ್ದಲ್ಲದೆ, ಕಾವೇರಿ ನದಿಗೆ ಬಾಗಿನ ಅರ್ಪಿಸಿದರು.

5 ನೇ ಬಾರಿಗೆ ಬಂದು ನಾನು ಕೆಆರ್‌ಎಸ್ ಬಾಗಿನ ನೀಡಿದ್ದೇನೆ. ಇದು ನನ್ನ ಸೌಭಾಗ್ಯವಾಗಿದೆ ಎಂದು KRS ನಲ್ಲಿ ಸಿ ಎಂ ಯಡಿಯೂರಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರತಿ ವರ್ಷವೂ ಇದೇ ರೀತಿ ಕಾವೇರಿ ತುಂಬಿ ಹರಿಯಲಿ. ಈ ನಾಡಿನ ರೈತರಿಗೆ ಅನುಕೂಲವಾಗಲೆಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ. ಗೌರಿ-ಗಣೇಶ ಹಬ್ಬದಂದು ಬಾಗಿನ ನೀಡುವ ಸೌಭಾಗ್ಯ ನನಗೆ ಸಿಕ್ಕಿದೆ. ರಾಜ್ಯದ ಎಲ್ಲಾ ಜಲಾಶಯಗಳು ತುಂಬಿ ತುಳುಕುತ್ತಿವೆ. ಈ ವರ್ಷ ರೈತ ಅತ್ಯಂತ ಸಂತೋಷದಿಂದ ಬೆಳೆ ಬೆಳೆಯಲು ಅನುಕೂಲವಾಗಿದೆ. ವರುಣ ದೇವ ಪ್ರತಿ ವರ್ಷ ಇದೇ ರೀತಿ ಕೃಪೆ ತೋರಬೇಕು. ಇದರಿಂದ ಮಳೆ- ಬೆಳೆಯಾಗಿ ರೈತ ಸಂತಸದಿಂದ ಇರುತ್ತಾನೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಸಿಎಂ ಯಡಿಯೂರಪ್ಪನವರಿಗೆ ಈ ಕಾರ್ಯಕ್ರಮದಲ್ಲಿ ಸಚಿವರಾದ ರಮೇಶ್ ಜಾರಕಿಹೋಳಿ, ನಾರಾಯಣ್ ಗೌಡ, ಎಸ್ ಟಿ ಸೋಮಶೇಖರ್, ಸಂಸದರಾದ ಸುಮಲತಾ, ಪ್ರತಾಪ್ ‌ಸಿಂಹ, ಶಾಸಕರಾದ ಅನ್ನದಾನಿ, ರವಿಂದ್ರ, ಶ್ರೀಕಂಠಯ್ಯ ಸಾಥ್ ನೀಡಿದರು.

ಈ ಕಾರ್ಯಕ್ರಮಕ್ಕೂ ಮುಂಚೆ, ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪನವರು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ನಂತರ ಕಬಿನಿ ಜಲಾಶಯದ ಕೆಳ ಭಾಗದಲ್ಲಿ ಮೇಲ್ಮಟ್ಟದ ಸೇತುವೆ ಹಾಗೂ ಸಂಪರ್ಕ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಶಾಸಕರಾದ ಸಿ.ಅನಿಲ್ ಚಿಕ್ಕಮಾದು, ಎಸ್.ಎ.ರಾಮದಾಸ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Published On - 1:38 pm, Fri, 21 August 20