ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ಸಿ. ಜೋಸೆಫ್ ವಿಜಯ್
ತಮಿಳುನಾಡು ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದ ಸಿಎಂ ವಿಜಯ್, ತಮ್ಮ ಸರ್ಕಾರವು ದ್ವೇಷ ರಾಜಕಾರಣ ಮಾಡುವುದಿಲ್ಲ ಎಂದು ಘೋಷಿಸಿದ್ದಾರೆ. ಇದು ಅಲ್ಪಸಂಖ್ಯಾತರು, ಮಹಿಳೆಯರು, ಮಕ್ಕಳು ಸೇರಿದಂತೆ ಎಲ್ಲರಿಗಾಗಿ ಇರುವ, ಜಾತಿ-ಮತ ರಹಿತ, ಸಮಾಜ ಕಲ್ಯಾಣಕ್ಕೆ ಆದ್ಯತೆ ನೀಡುವ ಪ್ರಾಮಾಣಿಕ ಆಡಳಿತ ಎಂದು ಪ್ರತಿಜ್ಞೆ ಮಾಡಿದ ಅವರು, ಜನರ ಕಲ್ಯಾಣವೇ ತಮ್ಮ ಸರ್ಕಾರದ ಏಕೈಕ ನಿಲುವು ಎಂದು ತಿಳಿಸಿದ್ದಾರೆ.
ಚೆನ್ನೈ, ಮೇ 13: ತಮಿಳುನಾಡು ವಿಧಾನಸಭೆಯಲ್ಲಿ ನಡೆದ ವಿಶ್ವಾಸಮತ ಯಾಚನೆ ಪ್ರಕ್ರಿಯೆಯಲ್ಲಿ ಸಿಎಂ ವಿಜಯ್ ನೇತೃತ್ವದ ಸರ್ಕಾರ ಬಹುಮತ ಸಾಬೀತುಪಡಿಸಿದೆ. ಈ ಸಂದರ್ಭದಲ್ಲಿ ಮಾತನಾಡಿದ ವಿಜಯ್, ತಮ್ಮ ಸರ್ಕಾರಕ್ಕೆ ಯಾರ ಮೇಲೂ ದ್ವೇಷವಿಲ್ಲ, ದ್ವೇಷ ರಾಜಕಾರಣ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಮಿಳಗ ವೆಟ್ರಿ ಕಳಗಂ ಪಕ್ಷವು ಯಾವುದೇ ಮೈತ್ರಿ ಇಲ್ಲದೆ ಸ್ವತಂತ್ರವಾಗಿ ಚುನಾವಣೆಗೆ ಸ್ಪರ್ಧಿಸಿ, 1.72 ಕೋಟಿಗೂ ಹೆಚ್ಚು ಮತಗಳನ್ನು ಪಡೆದು ಪ್ರಮುಖ ಶಕ್ತಿಯಾಗಿ ಹೊರಹೊಮ್ಮಿದೆ. ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು, ಯುವಕರು, ಸರ್ಕಾರಿ ನೌಕರರು, ಶಿಕ್ಷಕರು ಮತ್ತು ದುಡಿಯುವ ವರ್ಗ ಸೇರಿದಂತೆ ಸಮಾಜದ ಎಲ್ಲಾ ವರ್ಗದ ಜನರಿಗಾಗಿ ಈ ಸರ್ಕಾರವಿದೆ. ಪ್ರಾಮಾಣಿಕ ಮತ್ತು ಅಂತಃಸಾಕ್ಷಿಯ ಆಡಳಿತವನ್ನು ನೀಡಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

