Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಸದ್ಯಕ್ಕಂತೂ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ, ಹೈಕಮಾಂಡ್ ನಿರ್ಣಯಕ್ಕೆ ಎಲ್ಲರೂ ತಲೆಬಾಗುತ್ತೇವೆ: ಎಂಬಿ ಪಾಟೀಲ್

ರಾಜ್ಯದಲ್ಲಿ ಸದ್ಯಕ್ಕಂತೂ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ, ಹೈಕಮಾಂಡ್ ನಿರ್ಣಯಕ್ಕೆ ಎಲ್ಲರೂ ತಲೆಬಾಗುತ್ತೇವೆ: ಎಂಬಿ ಪಾಟೀಲ್

ಅರುಣ್​ ಕುಮಾರ್​ ಬೆಳ್ಳಿ
|

Updated on: Apr 15, 2024 | 5:57 PM

ವಿಜಯೇಂದ್ರರನ್ನು ಕೇವಲ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಅಧ್ಯಕ್ಷ ಮಾಡಲಾಗಿದೆ. ವಿಜಯೇಂದ್ರ ಅವಧಿ ಕೇವಲ ಮೂರು ವರ್ಷ ಮಾತ್ರ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರೇ ಹೇಳಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಗಿಂತ ಮೊದಲೇ ಅವರನ್ನು ಕೆಳಗಿಳಿಸಲಾಗುತ್ತದೆ ಎಂದರು.

ವಿಜಯಪುರ: ವಿಜಯಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ (Raju Algur) ಇಂದು ಸಚಿವರಾದ ಎಂಬಿ ಪಾಟೀಲ್ (MB Patil), ಶಿವಾನಂದ ಪಾಟೀಲ್ (Shivanand Patil) ಮತ್ತು ಇನ್ನೂ ಹಲವಾರು ಸ್ಥಳೀಯ ನಾಯಕರೊಂದಿಗೆ ಭಾರೀ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಎಂಬಿ ಪಾಟೀಲ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಕಾಲೆಳೆದರು. ವಿಜಯೇಂದ್ರರನ್ನು ಕೇವಲ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಅಧ್ಯಕ್ಷ ಮಾಡಲಾಗಿದೆ. ವಿಜಯೇಂದ್ರ ಅವಧಿ ಕೇವಲ ಮೂರು ವರ್ಷ ಮಾತ್ರ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರೇ ಹೇಳಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಗಿಂತ ಮೊದಲೇ ಅವರನ್ನು ಕೆಳಗಿಳಿಸಲಾಗುತ್ತದೆ ಎಂದರು. ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವ ಬಗ್ಗೆ ಕೇಳಿದ ಪ್ರಶ್ನೆಗೆ ಪಾಟೀಲ್, ಸದ್ಯಕ್ಕಂತೂ ಸಿಎಂ ಸೀಟು ಖಾಲಿ ಇಲ್ಲ, ಕಾಂಗ್ರೆಸ್ ಪಕ್ಷದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ, ಅಲ್ಲಿಂದ ಏನೇ ನಿರ್ಣಯ ಬಂದರೂ ರಾಜ್ಯದ ನಾಯಕರು ತಲೆಬಾಗಿ ಸ್ವೀಕರಿಸುತ್ತಾರೆ ಎಂದು ಹೇಳಿದರು. ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಎಷ್ಟು ಸ್ಥಾನ ಸಿಗಲಿವೆ ಅಂತ ಕೇಳಿದಾಗ ಅವರು ಕನಿಷ್ಠ 20 ಸೀಟು ಸಿಗೋದು ನಿಶ್ಚಿತ 24 ಸಿಕ್ಕರೂ ಆಶ್ವರ್ಯವಿಲ್ಲ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ನೂರಾರು ವರ್ಷಗಳಿಂದ ಇದ್ದರೂ ಸಿಗದ ಹಕ್ಕು ಪತ್ರಗಳು; ಲೋಕಸಭಾ ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಿದ ಗ್ರಾಮಸ್ಥರು