ಸಿಎಂ ಕುರ್ಚಿ ಖಾಲಿ ಇಲ್ಲ: ನಾನೇ ಮುಂದುವರಿಯುತ್ತೇನೆ, ಸಿದ್ದರಾಮಯ್ಯ ಸ್ಪಷ್ಟನೆ

Updated on: Sep 11, 2024 | 5:53 PM

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಿಎಂ ಆಗಿ ನಾನೇ ಮುಂದುವರಿಯುತ್ತೇನೆ. ಯಾರೂ ಹೇಳಿಕೆ ಕೊಟ್ಟಿಲ್ಲ, ಸಿಎಂ ಕುರ್ಚಿ ಖಾಲಿ ಇಲ್ಲ. ಸಿಎಂ ಹುದ್ದೆ ಖಾಲಿಯಾದಾಗ ನಾವು ಬರುತ್ತೇವೆ ಎಂದಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ. ಸದ್ಯ ರಾಜ್ಯ ರಾಜಕೀಯದಲ್ಲಿ ಸಿಎಂ ಸ್ಥಾನಕ್ಕೆ ಪೈಪೋಟಿ ಶುರುವಾಗಿದೆ.

ಬೆಂಗಳೂರು, ಸೆಪ್ಟೆಂಬರ್​ 11: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆಯ ಕೂಗು ಜೋರಾಗಿದೆ. ಪ್ರತಿಯೊಬ್ಬರು ಅವಕಾಶ ಸಿಕ್ಕರೇ ನಾನು ಸಿಎಂ ಆಗುತ್ತೆ ಎನ್ನುತ್ತಿದ್ದಾರೆ. ಇದೆಲ್ಲದರ ನಡುವೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ (Siddaramaiah) ಸಿಎಂ ಕುರ್ಚಿ ಖಾಲಿ ಇಲ್ಲ. ನಾನೇ ಮುಂದುವರಿಯುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ. ಯಾರೂ ಹೇಳಿಕೆ ಕೊಟ್ಟಿಲ್ಲ. ಸಿಎಂ ಹುದ್ದೆ ಖಾಲಿಯಾದಾಗ ನಾವು ಬರುತ್ತೇವೆ ಎಂದಿದ್ದಾರೆ. ಯಾವುದೇ ಡೌಟು ಇಲ್ಲ, ನಾನೇ ಮುಂದುವರಿಯುತ್ತೇನೆ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.

ವರದಿ: ಈರಣ್ಣ ಬಸವ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More