AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?: ಸುಳಿವು ಕೊಟ್ಟ ಸಿಎಂ ಡಿಕೆ ಶಿವಕುಮಾರ್​​

ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?: ಸುಳಿವು ಕೊಟ್ಟ ಸಿಎಂ ಡಿಕೆ ಶಿವಕುಮಾರ್​​

ಭಾವನಾ ಹೆಗಡೆ
|

Updated on:Nov 12, 2026 | 8:47 PM

Share

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದಲ್ಲಿ ಶಿಕ್ಷಣ ಸುಧಾರಣೆಗೆ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ. ಸರ್ಕಾರಿ ಶಾಲಾ ಮಕ್ಕಳಿಗೆ ಉತ್ತಮ ಸಮವಸ್ತ್ರ ನೀಡುವುದು, 1,574 ಬ್ಯಾಕ್ ಲಾಗ್ ಹುದ್ದೆಗಳ ಭರ್ತಿ, ಎಸ್‌ಸಿ/ಎಸ್‌ಟಿ ಸಮಾವೇಶ ಆಯೋಜನೆ ಮತ್ತು ವಿವಿಧ ಸಮುದಾಯಗಳೊಂದಿಗೆ ಸಭೆ ನಡೆಸುವ ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ. ಪ್ರಾಥಮಿಕ ಶಿಕ್ಷಣ ತಮ್ಮ ಆದ್ಯತೆಯ ವಿಷಯ ಎಂದಿದ್ದಾರೆ.

ಬೆಂಗಳೂರು, ನವೆಂಬರ್ 12: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಸರ್ಕಾರಿ ಶಾಲಾ ಮಕ್ಕಳು ಉತ್ತಮ ಸೌಲಭ್ಯಗಳನ್ನು ಹೊಂದಿರಬೇಕು ಎಂದು ಪ್ರತಿಪಾದಿಸಿದ್ದಾರೆ. ಹಾಸ್ಟೆಲ್ ಮತ್ತು ಶಾಲಾ ಮಕ್ಕಳಿಗೆ ಹೊಸ ಚಿಂತನೆ ಮತ್ತು ವಿನ್ಯಾಸದ ಸಮವಸ್ತ್ರ ನೀಡುವ ಬಗ್ಗೆ ಶಿಕ್ಷಣ ಇಲಾಖೆಗೆ ಸಲಹೆ ನೀಡಲಾಗಿದೆ. ಖಾಸಗಿ ಶಾಲೆಗಳ ಮಕ್ಕಳಂತೆ ಸರ್ಕಾರಿ ಶಾಲಾ ಮಕ್ಕಳೂ ಚೆನ್ನಾಗಿ ಕಾಣಬೇಕು ಎನ್ನುವುದು ತಮ್ಮ ಉದ್ದೇಶ ಎಂದು ಸಿಎಂ ತಿಳಿಸಿದ್ದಾರೆ.

ಈ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ ಮುಖ್ಯಮಂತ್ರಿಗಳು, ಪ್ರಾಥಮಿಕ ಶಿಕ್ಷಣವು ತಮ್ಮ ನೆಚ್ಚಿನ ವಿಷಯ ಮತ್ತು ಶಿಕ್ಷಣದ ಅಡಿಪಾಯವಾಗಿದೆ ಎಂದು ಬಣ್ಣಿಸಿದರು. 2001 ರಿಂದ 2025 ರವರೆಗೆ ಬಾಕಿ ಉಳಿದಿರುವ 1,574 ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳುವುದಾಗಿಯೂ ಘೋಷಿಸಿದರು. ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ ಕನ್ವೆನ್ಷನ್ ಆಯೋಜಿಸಲು ಮತ್ತು ವಿವಿಧ ಸಮುದಾಯಗಳ ಶಾಸಕರೊಂದಿಗೆ ಸಭೆ ನಡೆಸಲು ಸಹ ಯೋಜಿಸಲಾಗಿದೆ ಎಂದು ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Nov 12, 2026 08:37 PM

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More