ಮಾಜಿ ಶಾಸಕ ಭೀಮಾನಾಯ್ಕ ಮಗನ ಆರತಕ್ಷತೆ ಕಾರ್ಯಕ್ರಮದಲ್ಲಿ ಸಿಎಂ ಡಿಕೆಶಿ-ಮಾಜಿ ಸಚಿವ ಆನಂದ್ ಸಿಂಗ್ ಪ್ರತ್ಯೇಕ ಚರ್ಚೆ
ಹೊಸಪೇಟೆಯಲ್ಲಿ ಮಾಜಿ ಶಾಸಕ ಭೀಮಾನಾಯ್ಕ ಪುತ್ರನ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಸಚಿವ ಆನಂದ್ ಸಿಂಗ್ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ರಾಜಕೀಯ ಚರ್ಚೆಯೋ ಅಥವಾ ಸ್ನೇಹದ ಮಾತುಕತೆಯೋ ಎಂಬ ಪ್ರಶ್ನೆಗಳು ಉದ್ಭವಿಸಿವೆ.
ವಿಜಯನಗರ, ನವೆಂಬರ್ 27: ಮಾಜಿ ಶಾಸಕ ಭೀಮಾನಾಯ್ಕ ಮಗನ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಿಎಂ ಡಿಕೆ ಶಿವಕುಮಾರ್, ಮಾಜಿ ಸಚಿವ ಆನಂದ್ ಸಿಂಗ್ ಜೊತೆಗೆ ಪ್ರತ್ಯೇಕ ಚರ್ಚೆ ನಡೆಸಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವಿಜಯಶ್ರೀ ಹೆರಿಟೇಜ್ನಲ್ಲಿ ನಡೆದ ಮದುವೆ ಸಮಾರಂಭದ ವೇಳೆ ಕೆಲಹೊತ್ತು ನಡೆದಿರುವ ಉಭಯ ನಾಯಕರ ನಡುವಿನ ಮಾತುಕತೆಯೀಗ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ರಾಜಕೀಯ ಚರ್ಚೆಯೋ ಅಥವಾ ಸ್ನೇಹದ ಮಾತುಕತೆಯೋ ಎಂಬ ಪ್ರಶ್ನೆಗಳು ಉದ್ಭವಿಸಿವೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
