AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಲ್‌ಬಾಗ್​​ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

ಲಾಲ್‌ಬಾಗ್​​ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

ಪ್ರಸನ್ನ ಹೆಗಡೆ
|

Updated on:Aug 06, 2026 | 2:50 PM

Share

ಸಿಎಂ ಡಿ.ಕೆ. ಶಿವಕುಮಾರ್ ಅವರು 220ನೇ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ್ದಾರೆ. ಗಂಗರ ಸಾಮ್ರಾಜ್ಯದ 1,000 ವರ್ಷಗಳ ವೈಭವವನ್ನು ಹೂವಿನಲ್ಲಿ ಅನಾವರಣಗೊಳಿಸಿದ್ದು, ಶ್ರವಣಬೆಳಗೊಳದ ಬಾಹುಬಲಿ, ತಲಕಾಡು ದೇಗುಲಗಳ ಹೂವಿನ ಪ್ರತಿಕೃತಿಗಳು ಪ್ರಮುಖ ಆಕರ್ಷಣೆಯಾಗಿವೆ. ಆಗಸ್ಟ್ 17ರವರೆಗೆ ಸಾರ್ವಜನಿಕರು ಈ ಪ್ರದರ್ಶನವನ್ನು ವೀಕ್ಷಿಸಬಹುದು. ಆನ್‌ಲೈನ್ ಟಿಕೆಟ್ ಮತ್ತು ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರು, ಆಗಸ್ಟ್​​ 06: ಇಂದಿನಿಂದ ಆಗಸ್ಟ್ 17ರವರೆಗೆ ಬೆಂಗಳೂರಿನ ಲಾಲ್​ಬಾಗ್​ನಲ್ಲಿ ನಡೆಯಲಿರುವ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ ನೀಡಿದ್ದಾರೆ. ಈ ಬಾರಿ ಗಂಗರ ವೈಭವ ಸಾರುವ ಫಲಪುಷ್ಪ ಪ್ರದರ್ಶನ ಆಯೋಜನೆ ಮಾಡಲಾಗಿದ್ದು, ಕಾರ್ಕ್ರಮದಲ್ಲಿ ಸಿಎಂಗೆ ಜೆಡಿಎಸ್​ ಎಂಎಲ್​ಸಿ ಶರವಣ ಸಾಥ್​ ನೀಡಿದ್ದಾರೆ. ಫಲಪುಷ್ಪ ಉದ್ಘಾಟನೆ ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ನಾಡಿನ ಎಲ್ಲ ಜನತೆಗೆ ಸ್ವಾತಂತ್ರ್ಯೋತ್ಸವದ ಹಿನ್ನೆಲೆ ಫಲಪುಷ್ಪ ಪ್ರದರ್ಶನ ನೋಡಬೇಕು. ವಿಶೇಷವಾಗಿ ಹೆಣ್ಣುಮಕ್ಕಳು, ಮಕ್ಕಳು ಎಲ್ಲರೂ ಬರಬೇಕು. ಈ ಅವಕಾಶ ಕಳೆದುಕೊಳ್ಳಬಾರದು ಎಂದು ಕರೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Aug 06, 2026 02:48 PM

Follow Us