ಲಾಲ್ಬಾಗ್ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ
ಸಿಎಂ ಡಿ.ಕೆ. ಶಿವಕುಮಾರ್ ಅವರು 220ನೇ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ್ದಾರೆ. ಗಂಗರ ಸಾಮ್ರಾಜ್ಯದ 1,000 ವರ್ಷಗಳ ವೈಭವವನ್ನು ಹೂವಿನಲ್ಲಿ ಅನಾವರಣಗೊಳಿಸಿದ್ದು, ಶ್ರವಣಬೆಳಗೊಳದ ಬಾಹುಬಲಿ, ತಲಕಾಡು ದೇಗುಲಗಳ ಹೂವಿನ ಪ್ರತಿಕೃತಿಗಳು ಪ್ರಮುಖ ಆಕರ್ಷಣೆಯಾಗಿವೆ. ಆಗಸ್ಟ್ 17ರವರೆಗೆ ಸಾರ್ವಜನಿಕರು ಈ ಪ್ರದರ್ಶನವನ್ನು ವೀಕ್ಷಿಸಬಹುದು. ಆನ್‌ಲೈನ್ ಟಿಕೆಟ್ ಮತ್ತು ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
ಬೆಂಗಳೂರು, ಆಗಸ್ಟ್ 06: ಇಂದಿನಿಂದ ಆಗಸ್ಟ್ 17ರವರೆಗೆ ಬೆಂಗಳೂರಿನ ಲಾಲ್ಬಾಗ್ನಲ್ಲಿ ನಡೆಯಲಿರುವ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ ನೀಡಿದ್ದಾರೆ. ಈ ಬಾರಿ ಗಂಗರ ವೈಭವ ಸಾರುವ ಫಲಪುಷ್ಪ ಪ್ರದರ್ಶನ ಆಯೋಜನೆ ಮಾಡಲಾಗಿದ್ದು, ಕಾರ್ಕ್ರಮದಲ್ಲಿ ಸಿಎಂಗೆ ಜೆಡಿಎಸ್ ಎಂಎಲ್ಸಿ ಶರವಣ ಸಾಥ್ ನೀಡಿದ್ದಾರೆ. ಫಲಪುಷ್ಪ ಉದ್ಘಾಟನೆ ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ನಾಡಿನ ಎಲ್ಲ ಜನತೆಗೆ ಸ್ವಾತಂತ್ರ್ಯೋತ್ಸವದ ಹಿನ್ನೆಲೆ ಫಲಪುಷ್ಪ ಪ್ರದರ್ಶನ ನೋಡಬೇಕು. ವಿಶೇಷವಾಗಿ ಹೆಣ್ಣುಮಕ್ಕಳು, ಮಕ್ಕಳು ಎಲ್ಲರೂ ಬರಬೇಕು. ಈ ಅವಕಾಶ ಕಳೆದುಕೊಳ್ಳಬಾರದು ಎಂದು ಕರೆ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Aug 06, 2026 02:48 PM
Loading...
Unable to load recommendations.
Follow Us
