ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ಸಿಎಂಗೆ ಹೂಮಳೆಗರೆದು ಸ್ವಾಗತ

Edited By:

Updated on: Sep 18, 2026 | 12:13 PM

ಮಂಗಳೂರಲ್ಲಿ ನಡೆಯಲಿರುವ ಸಂಪುಟ ಸಭೆಗೂ ಮುನ್ನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರಿಗೆ ಪೂರ್ಣಕುಂಭ ಸ್ವಾಗತ ದೊರೆಯಿತು. ಕಂದಾಯ ಇಲಾಖೆಯ ಮಹಿಳಾ ಸಿಬ್ಬಂದಿ ಹೂಮಳೆಗರೆದು ಸ್ವಾಗತಿಸಿದರು. ಮುಖ್ಯಮಂತ್ರಿಗಳು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಾಡಿಗೆ ಒಳಿತು ಕೋರಿದರು.

ಮಂಗಳೂರು, ಸೆಪ್ಟೆಂಬರ್​​ 18: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳೂರಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಗೂ ಮುನ್ನ ತಮ್ಮ ಸಂಪುಟ ಸಹೋದ್ಯೋಗಿಗಳ ಜೊತೆಗೆ ಕದ್ರಿಯ ಮಂಜುನಾಥ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಗಳನ್ನು ಪೂರ್ಣಕುಂಭದೊಂದಿಗೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಭಕ್ತರು ಸ್ವಾಗತಿಸಿದ್ದಾರೆ. ಕಂದಾಯ ಇಲಾಖೆಯ ಮಹಿಳಾ ಸಿಬ್ಬಂದಿ ಹೂಮಳೆಗರೆದು ಸಿಎಂ ಅವರನ್ನು ಸ್ವಾಗತಿಸಿದ್ದು ವಿಶೇಷವಾಗಿತ್ತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Sep 18, 2026 12:13 PM
Loading...
Unable to load recommendations.
Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More