ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಬಗ್ಗೆ ಮುಖ್ಯಮಂತ್ರಿ ಸ್ಪಷ್ಟತೆ ನೀಡಲಿಲ್ಲ: ಸ್ವಾಮೀಜಿ
ಬೆಳಗಾವಿ ಆಧಿವೇಶನ ಡಿಸೆಂಬರ್ 9ರಂದು ಶುರುವಾಗಲಿದೆ, ಅಷ್ಟರೊಳಗೆ ಮುಖ್ಯಮಂತ್ರಿಯವರು ಯಾವುದೇ ಕಾಯ್ದೆ-ಕಾನೂನಿನ ನೆಪ ಹೇಳದೆ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಘೋಷಿಸದಿದ್ದರೆ ಅಧಿವೇಶನ ನಡೆಯಲು ಬಿಡುವುದಿಲ್ಲ, ಪಂಚಮಸಾಲಿ ಸಮುದಾಯದ 10,000 ವಕೀಲರು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ ಎಂದು ಮೃತ್ಯುಂಜಯ ಸ್ವಾಮೀಜಿ ಎಚ್ಚರಿಸಿದರು.
ಬೆಂಗಳೂರು: ಪಂಚಮಸಾಲಿ ಸಮುದಾಯ ನಡೆಸುತ್ತಿರುವ 2ಎ ಮೀಸಲಾತಿಗೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದ ಸಭೆಯಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮ ಗೋಷ್ಠಿಯಲ್ಲಿ ಮಾತಾಡಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು, ಸರ್ಕಾರದ ಜೊತೆ ಆರೋಗ್ಯಕರ ಸಭೆ ನಡೆದದ್ದೂ ನಿಜವಾದರೂ 2ಎ ಮೀಸಲಾತಿಯನ್ನು ನಿರ್ದಿಷ್ಟ ಗಡುವಿನೊಳಗೆ ಜಾರಿ ಮಾಡುವ ಬಗ್ಗೆ ಮುಖ್ಯಮಂತ್ರಿಯವರು ಸ್ಪಷ್ಟತೆ ನೀಡಲಿಲ್ಲ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಪಂಚಮಸಾಲಿ ಮೀಸಲಾತಿ ಬೇಡಿಕೆ: ತಮ್ಮ ಸರ್ಕಾರದ ನಿಲುವು ಸ್ಪಷ್ಟಪಡಿಸಿದ ಸಿಎಂ
Latest Videos

ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್ ಯತ್ನಾಳ್

Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್ಪ್ರೆಸ್ ರೈಲು

IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ

ಹೋಟೆಲ್ನ ಕೊನೆಯ ಮಹಡಿಯ ಸ್ವಿಮ್ಮಿಂಗ್ ಪೂಲ್ನಲ್ಲಿ ಮಲಗಿದ್ದ ಜೋಡಿ
